ಸಾಂದರ್ಭಿಕ ಚಿತ್ರ 
ದೇಶ

ನಿಪ್ಹಾ ವೈರಾಣು ಸಾಂಕ್ರಾಮಿಕವಲ್ಲ- ಕೇಂದ್ರ ಸರ್ಕಾರ ಹೇಳಿಕೆ

ಕೇರಳದಲ್ಲಿ 11 ಜನರನ್ನು ಬಲಿಪಡೆದಿರುವ ನಿಪ್ಹಾ ವೈರಾಣು ಸಾಂಕ್ರಾಮಿಕ ರೋಗವಲ್ಲ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ರಾಜ್ಯ ಸಚಿವ ಅಶ್ವಿನಿ ಕುಮಾರ್ ಚೌಬೆ ಹೇಳಿದ್ದಾರೆ.

ನವದೆಹಲಿ : ಕೇರಳದಲ್ಲಿ 11 ಜನರನ್ನು ಬಲಿಪಡೆದಿರುವ ನಿಪ್ಹಾ ವೈರಾಣು ಸಾಂಕ್ರಾಮಿಕ ರೋಗವಲ್ಲ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ರಾಜ್ಯ ಸಚಿವ ಅಶ್ವಿನಿ ಕುಮಾರ್ ಚೌಬೆ ಹೇಳಿದ್ದಾರೆ.

ಡಾಕ್ಟರನ್ನೊಳಗೊಂಡ ಕೇಂದ್ರ ತಂಡ ಸ್ಥಳದಲ್ಲಿಯೇ ಇದ್ದು ಪರಿಸ್ಥಿತಿಯನ್ನು ಕೇಂದ್ರ ಸರ್ಕಾರ ಹತ್ತಿರದಿಂದಲೇ ಗಮನಿಸುತ್ತಿದೆ. ಇದು ಸ್ಥಳೀಯವಾಗಿದ್ದು, ಸಾಂಕ್ರಮಿಕ ರೋಗವಲ್ಲ, ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದು, ಜನರು ವದಂತಿಗಳಿಗೆ ಕಿವಿಗೂಡಬೇಡಿ ಎಂದು ಅವರು ಎಎನ್ ಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ಕೇರಳದಲ್ಲಿನ ಮಾರಣಾಂತಿಕ ವೈರಾಣುವಿಂದಾಗಿ 11 ಮಂದಿ ಮೃತಪಟ್ಟಿದ್ದಾರೆ. ರಾಜ್ಯಕ್ಕೆ ಆಗಮಿಸುತ್ತಿರುವ ಪ್ರವಾಸಿಗರಿಗೆ ರಾಜ್ಯ ಆರೋಗ್ಯ ಇಲಾಖೆಯಿಂದ  ಸಲಹೆ ನೀಡಲಾಗುತ್ತಿದೆ. ಕೋಝಿಕೊಡು, ಮಲ್ಲಪುರಂ, ವೈನಾಡು ಮತ್ತು ಕಣ್ಣೂರು ಜಿಲ್ಲೆಗಳಿಗೆ ಪ್ರವಾಸಕ್ಕೆ ತೆರಳುವವರು ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಅವರು ಸೂಚನೆ ನೀಡುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ಕಾರ್ಮಿಕರ ಆರೋಗ್ಯ ತಪಾಸಣೆ ಹೆಸರಲ್ಲಿ 800 ಕೋಟಿ ರೂ. ಲೂಟಿ; ಸಂತೋಷ್ ಲಾಡ್ ರಾಜೀನಾಮೆಗೆ ಆರಗ ಜ್ಞಾನೇಂದ್ರ ಆಗ್ರಹ

ಹೆನ್ರಿ ಕಗನ್, ಕೆನ್ಸೊ ಸೊವೈಗೆ 2026ರ ರಸಾಯನಶಾಸ್ತ್ರದ ನೊಬೆಲ್ ಪ್ರಶಸ್ತಿ

'ನಾನು ಕ್ಯಾಬ್‌ನಲ್ಲಿ ಓಡಾಡೋ ಹುಡುಗಿ ಕಣ್ರೋ.. ಹೋಗ್ಲಿ ಪಾಪ ಅಂತಾ ಬಸ್`ನಲ್ಲಿ ಬಂದೆ': MTC ಬಸ್‌ನಲ್ಲಿ ಕುಡಿದ ಮತ್ತಿನಲ್ಲಿ ಯುವತಿ ರಂಪಾಟ, Video ವೈರಲ್