ಸಂಗ್ರಹ ಚಿತ್ರ 
ದೇಶ

ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ 'ಫಿಟ್ನೆಸ್ ಚಾಲೆಂಜ್' ಒಪ್ಪಿಕೊಂಡ ಪ್ರಧಾನಿ ಮೋದಿ

ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿಯವರ ಫಿಟ್ನೆಸ್ ಸವಾಲನ್ನು ಪ್ರಧಾನಿ ಮೋದಿ ಗುರುವಾರ ಸ್ವೀಕರಿಸಿದ್ದಾರೆ.

ನವದೆಹಲಿ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿಯವರ ಫಿಟ್ನೆಸ್ ಸವಾಲನ್ನು ಪ್ರಧಾನಿ ಮೋದಿ ಗುರುವಾರ ಸ್ವೀಕರಿಸಿದ್ದಾರೆ.
ಕೇಂದ್ರ ಯುವಜನ ಮತ್ತು ಮತ್ತು ಕ್ರೀಡಾ ಸಚಿವ ರಾಜವರ್ಧನ್ ಸಿಂಗ್ ರಾಥೋಡ್ ಅವರು ಮೇ 22 ರಂದು, 'ನಾನು ಫಿಟ್ ಆದ್ರೆ ದೇಶ ಫಿಟ್ (#HumFitTohIndiaFit ) ನೀವು ನಿಮ್ಮ ಫಿಟ್ ನೆಸ್ ಗೆ ಸಂಬಂಧಿಸಿದ ಫೋಟೋ ಮತ್ತು ವಿಡಿಯೋವನ್ನು ಶೇರ್ ಮಾಡಿ' ಎಂದು ಕೊಹ್ಲಿ, ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್, ನಟ ಹೃತಿಕ್ ರೋಷನ್ ಅವರಿಗೆ ಫಿಟ್ ನೆಸ್ ಚಾಲೆಂಜ್ ಹಾಕಿ ಟ್ವೀಟ್ ಮಾಡಿದ್ದರು.
ಈ ಟ್ವೀಟ್ ಗೆ ವಿರಾಟ್ ಕೊಹ್ಲಿ ಪ್ರತಿಕ್ರಿಯೆ ನೀಡಿದ್ದು, ತಮ್ಮ ಜಿಮ್ ನ ವಿಡಿಯೋವನ್ನು ಅಪ್ಲೋಡ್ ಮಾಡುವ ಮೂಲಕ ಚಾಲೆಂಜ್ ಸ್ವೀಕರಿಸಿದ್ದಾರೆ. ಅಷ್ಟೇ ಅಲ್ಲದೇ ಪ್ರಧಾನಿ ಮೋದಿ, ಪತ್ನಿ ಅನುಷ್ಕಾ, ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಎಂಎಸ್ ಧೋನಿ ಅವರಿಗೆ ಚಾಲೆಂಜ್ ಹಾಕಿ ಟ್ವೀಟ್ ಮಾಡಿದ್ದರು. 
ಕೊಹ್ಲಿ ಅವರ ಈ ಟ್ವೀಟ್ ಗೆ ಮೋದಿ ಪ್ರತಿಕ್ರಿಯಿಸಿದ್ದು, ಸವಾಲನ್ನು ಸ್ವೀಕರಿಸಿದ್ದೇನೆ. ನನ್ನ ಫಿಟ್ ನೆಸ್ ಕುರಿತ ವಿಡಿಯೋವನ್ನು ಅಪ್ಲೋಡ್ ಮಾಡುವುದಾಗಿ ಬರೆದುಕೊಂಡಿದ್ದಾರೆ. ಆ ಮೂಲಕ ಕೇಂದ್ರ ಸಚಿವ ರಾಜ್ಯವರ್ಧನ್ ಸಿಂಗ್ ರಾಥೋಡ್ ಅವರ #HumFitTohIndiaFit ಹ್ಯಾಶ್ ಟ್ಯಾಗ್ ವೈರಲ್ ಆಗುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT