ನವದೆಹಲಿ : ಕೇಂದ್ರಿಯ ಪ್ರೌಢ ಶಿಕ್ಷಣ ಮಂಡಳಿ ( ಸಿಬಿಎಸ್ ಇ) 12 ನೇ ತರಗತಿಯ ಪರೀಕ್ಷಾ ಫಲಿತಾಂಶ ನಾಳೆ ಪ್ರಕಟಗೊಳ್ಳಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
2017-18 ನೇ ಸಾಲಿನ ಅಕಾಡೆಮಿಕ್ ನ ಸಿಬಿಎಸ್ ಇ 12 ನೇ ತರಗತಿ ಫಲಿತಾಂಶ ನಾಳೆ ಪ್ರಕಟಗೊಳ್ಳಲಿದೆ ಎಂದು ಶಾಲಾ ಶಿಕ್ಷಣ ಕಾರ್ಯದರ್ಶಿ ಅನಿಲ್ ಸ್ವರೂಪ್ ಟ್ವಿಟರ್ ನಲ್ಲಿ ಹೇಳಿದ್ದಾರೆ.
ಸಿಬಿಎಸ್ ಇ 10 ನೇ ತರಗತಿ ಫಲಿತಾಂಶದ ದಿನಾಂಕ ಇನ್ನೂ ನಿರ್ಧಾರವಾಗಿಲ್ಲ. ಮಾರ್ಚ್ 3 ರಿಂದ ಏಪ್ರಿಲ್ 13 ರವರೆಗೆ 12 ನೇ ತರಗತಿ ಪರೀಕ್ಷೆ ದಿನಾಂಕ ನಿಗದಿಯಾಗಿತ್ತು.
ಆದರೆ, ಅರ್ಥಶಾಸ್ತ್ರ ಪ್ರಶ್ನೆ ಪತ್ರಿಕೆ ಸೋರಿಕೆಯಿಂದಾಗಿ ವಿದ್ಯಾರ್ಥಿಗಳು ಮರು ಪರೀಕ್ಷೆ ಬರೆಯಲು ಅನುಕೂಲ ಮಾಡಿಕೊಡುವ ಉದ್ದೇಶದಿಂದ ಏಪ್ರಿಲ್ 25 ರವರೆಗೂ ಪರೀಕ್ಷೆ ದಿನವನ್ನು ವಿಸ್ತರಿಸಲಾಗಿತ್ತು.