ಸಾಂದರ್ಭಿಕ ಚಿತ್ರ 
ದೇಶ

ಆರ್ ಎಸ್ ಎಸ್ ನಿಂದ ಪ್ರಧಾನಿ ಮೋದಿ ಸರ್ಕಾರದ ನಾಲ್ಕು ವರ್ಷದ ಆಡಳಿತ ಪರಾಮರ್ಶೆ

ಪ್ರಧಾನಿ ನರೇಂದ್ರಮೋದಿ ನೇತೃತ್ವದ ಕೇಂದ್ರಸರ್ಕಾರ ನಾಲ್ಕು ವರ್ಷದ ಸಾಧನೆಗಳನ್ನು ರಾಷ್ಟ್ರೀಯ ಸ್ವಯಂ ಸೇವಕ ಸಂಘ ಮೇ 28 ರಿಂದ 31ರವರೆಗೆ ಪರಾಮರ್ಶೆ ನಡೆಸಲಿದೆ.

ನವದೆಹಲಿ : ಪ್ರಧಾನಿ ನರೇಂದ್ರಮೋದಿ ನೇತೃತ್ವದ ಕೇಂದ್ರಸರ್ಕಾರದ  ನಾಲ್ಕು ವರ್ಷದ ಸಾಧನೆಗಳನ್ನು ರಾಷ್ಟ್ರೀಯ ಸ್ವಯಂ ಸೇವಕ  ಸಂಘ ಮೇ 28 ರಿಂದ 31ರವರೆಗೆ ಪರಾಮರ್ಶೆ ನಡೆಸಲಿದೆ.

ಆರ್ ಎಸ್ ಎಸ್ ಪ್ರಕಾರ ಪ್ರಸ್ತುತದಲ್ಲಿನ ಕೇಂದ್ರಸರ್ಕಾರ ಹಲವು ರಂಗಗಳಲ್ಲಿ ವಿಫಲವಾಗಿದೆ. ಪ್ರಮುಖ ಮುಖಂಡರಾದ ದತ್ತಾತ್ತ್ರೇಯ ಹೊಸಬಾಳೆ, ಕೃಷ್ಣ ಗೋಪಾಲ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹಾಗೂ ಪಕ್ಷದ ಮುಖಂಡ ರಾಮ್ ಲಾಲ್ ಈ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಪ್ರತಿದಿನದ ಸಭೆಯಲ್ಲಿ ಸರ್ಕಾರದ ಪ್ರಮುಖ ಸಚಿವಾಲಯಗಳ ಬಗ್ಗೆ ಚರ್ಚೆ ನಡೆಸಲಾಗುತ್ತದೆ. ಒಂದು ದಿನ ಆರ್ಥಿಕ ವಿಷಯಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಸಲಾಗುತ್ತದೆ. ಈ ಸಂದರ್ಭದಲ್ಲಿ ಹಣಕಾಸು ಸಚಿವರು ಉಪಸ್ಥಿತಿ ಇರುವರು. ಉದ್ಯೋಗ ಮತ್ತು ಹಣದುಬ್ಬರ ಬಗ್ಗೆಯೂ ಚರ್ಚೆ ನಡೆಸಲಾಗುತ್ತದೆ.

ಇದೇ ರೀತಿಯಲ್ಲಿ ಶಿಕ್ಷಣ, ವಿದೇಶಾಂಗ ನೀತಿ, ಭದ್ರತೆಗೆ ಸಂಬಂಧಿಸಿದಂತೆ ಚರ್ಚೆ ನಡೆಯಲಿದ್ದು, ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಚರ್ಚೆಯಲ್ಲಿ ಪಾಲ್ಗೊಳ್ಳಲಿದ್ದಾರೆ. 2019ರ ಲೋಕಸಭಾ ಚುನಾವಣೆಗೂ ಎಲ್ಲಾ ಸಚಿವಾಲಯದ ನಕ್ಷೆಯನ್ನು ಸಹ ರೂಪಿಸಲಾಗುತ್ತಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.








Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

Bigg Boss Kannada: ಟಾಸ್ಕ್ ವೇಳೆ ಕುಸಿದು ಬಿದ್ದ ನಟಿ ಸಂಗೀತಾ ಭಟ್; ಆರೋಗ್ಯದಲ್ಲಿ ಏರುಪೇರು! ವಿಡಿಯೋ ವೈರಲ್

42 ಎಸೆತ, 102 ರನ್: ವಿರಾಟ್ ಕೊಹ್ಲಿಯ ಸಾರ್ವಕಾಲಿಕ ದಾಖಲೆಯೇ ಉಡೀಸ್‌ ಮಾಡಿದ ಶ್ರೇಯಸ್ ಅಯ್ಯರ್‌!

ಹಾಸನದ ಹೇಮಾವತಿ ನಾಲೆಯಲ್ಲಿ ಪ್ಲಾಸ್ಟಿಕ್‌ ಚೀಲದಲ್ಲಿ ವೃದ್ಧೆಯ ಶವ ಪತ್ತೆ: ಕೊಲೆ ಶಂಕೆ