ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಗಡಿ ನುಸುಳುತ್ತಿದ್ದ 5 ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನೆ

ಅಂತಾರಾಷ್ಟ್ರೀಯ ಗಡಿಯಲ್ಲಿ ಅಕ್ರಮವಾಗಿ ಗಡಿ ನುಸುಳುತ್ತಿದ್ದ ಐವರು ಉಗ್ರರನ್ನು ಭಾರತೀಯ ಯೋಧರು ಹೊಡೆದುರುಳಿಸಿದ್ದಾರೆ...

ಭಾರತೀಯ ಸೇನೆ
Vishwanath S
Updated On : 26 May 2018, 12:48 pm
ಶ್ರೀನಗರ(ಜಮ್ಮು ಮತ್ತು ಕಾಶ್ಮೀರ): ಅಂತಾರಾಷ್ಟ್ರೀಯ ಗಡಿಯಲ್ಲಿ ಅಕ್ರಮವಾಗಿ ಗಡಿ ನುಸುಳುತ್ತಿದ್ದ ಐವರು ಉಗ್ರರನ್ನು ಭಾರತೀಯ ಯೋಧರು ಹೊಡೆದುರುಳಿಸಿದ್ದಾರೆ. 
ಜಮ್ಮು ಮತ್ತು ಕಾಶ್ಮೀರದ ತಂಗದಾರ್ ಸೆಕ್ಟರ್ ಬಳಿ ಐವರು ಗಡಿ ನುಸುಳಲು ಯತ್ನಿಸುತ್ತಿದ್ದು ಈ ವೇಳೆ ಗುಂಡಿನ ದಾಳಿ ನಡೆಸಿದ ಭಾರತೀಯ ಯೋಧರು ಉಗ್ರರ ಹುಟ್ಟಡಗಿಸಿದ್ದು ಅವರ ಬಳಿಯಿದ್ದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ. ಸದ್ಯ ಕಾರ್ಯಾಚರಣೆ ಮುಂದುವರೆದಿದೆ. 
ಉಗ್ರ ಎನ್ ಕೌಂಟರ್ ಬಳಿಕ ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಅವರು ಗಡಿಯಲ್ಲಿ ಶಾಂತಿ ನೆಲೆಸಬೇಕಾದರೆ ಉಗ್ರರ ಗಡಿ ನುಸುಳುವಿಕೆಗೆ ಅವಕಾಶ ನೀಡಬೇಡಿ ಎಂದು ಪಾಕಿಸ್ತಾನವನ್ನು ಎಚ್ಚರಿಸಿದ್ದಾರೆ. 

Advertisement

Advertisement

ಗಡಿಯಲ್ಲಿ ಶಾಂತಿಗಾಗಿ ನಾವು ಪ್ರಯತ್ನಿಸುತ್ತಿದ್ದೇವೆ ಆದರೆ ನೀವು ಕದನ ವಿರಾಮ ಉಲ್ಲಂಘಿಸಿ ಗುಂಡಿನ ದಾಳಿ ನಡೆಸುತ್ತಿದ್ದೀರಾ. ಈ ಮೂಲಕ ಜೀವ ಮತ್ತು ಆಸ್ತಿ ನಷ್ಟ ಉಂಟು ಮಾಡುತ್ತಿದ್ದೀರಾ. ಇದಕ್ಕೆ ಪ್ರತಿಯಾಗಿ ನಾವು ಪ್ರತಿ ದಾಳಿ ಮಾಡಬೇಕಾಗುತ್ತಿದೆ. ಪಾಕಿಸ್ತಾನ ಶಾಂತಿಯನ್ನು ಬಯಸುವುದೇ ಆದರೆ ಉಗ್ರರು ಗಡಿನುಸುಳುವಿಕೆಗೆ ಅವಕಾಶ ನೀಡಬೇಡಿ ಎಂದು ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement