ಶ್ರೀನಗರ: ಭಯೋತ್ಪಾದಕರು ಪೊಲೀಸರ ರೈಫಲ್ ನ್ನು ಕಸಿದಿರುವ ಘಟನೆ ಜಮ್ಮು-ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ನಡೆದಿದೆ.
ಪೊಲೀಸ್ ಮೂಲಗಳ ಪ್ರಕಾರ ದರ್ಬನ್ ನಲ್ಲಿ ಈ ಘಟನೆ ನಡೆದಿದ್ದು, ಸ್ಥಳೀಯ ಅಡ್ವೊಕೇಟ್ ಅವರಿಗೆ ಭದ್ರತೆ ಒದಗಿಸಲು ನಿಯೋಜಿಸಲಾಗಿದ್ದ ಪೊಲೀಸ್ ಸಿಬ್ಬಂದಿಯಿಂದ ಎಕೆ-47 ರೈಫಲ್ ಗಳನ್ನು ಹಾಗೂ ಐಎನ್ಎಸ್ಎಎಸ್ ರೈಫಲ್ ಗಳನ್ನು ಉಗ್ರರು ಕಸಿದಿದ್ದಾರೆ ಎಂದು ತಿಳಿದುಬಂದಿದೆ.
ಅವಾಮಿ ನ್ಯಾಷನಲ್ ಕಾನ್ಫರೆನ್ಸ್ ನ ರಾಜಕೀಯ ಕಾರ್ಯಕರ್ತನಾಗಿರುವ ಅಡ್ವೊಕೇಟ್, ಈ ಘಟನೆ ನಡೆದಾಗ ತಮ್ಮ ಸಂಬಂಧಿಕರ ಮನೆಯಲ್ಲಿದ್ದರು ಎಂದು ಹೇಳಲಾಗಿದೆ. ಘಟನೆ ನಡೆಯುತ್ತಿದ್ದಂತೆಯೇ ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆ ಹೊಣೆ ಹೊತ್ತಿದ್ದು ಕಸಿದುಕೊಂಡಿರುವ ರೈಫಲ್ ಗಳ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದೆ.