ವಿಜಯವಾಡ :ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಪ್ರಧಾನಿ ನರೇಂದ್ರಮೋದಿ ವಿರುದ್ಧ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನರೇಂದ್ರಮೋದಿ ಜನತೆಗೆ ನೀಡಿದ್ದ ಭರವಸೆ ಈಡೇರಿಸುವಲ್ಲಿ ವಿಫಲರಾಗಿದ್ದು, 2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಖಂಡಿತ ಅಧಿಕಾರಕ್ಕೆ ಬರುವುದಿಲ್ಲ ಎಂದು ಭವಿಷ್ಯ ನುಡಿದ್ದಾರೆ.
ಮಹಾನಾಡು ಟಿಡಿಪಿ ವಾರ್ಷಿಕ ಸಮ್ಮೇಳನದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಬಿಜೆಪಿ ಸರ್ಕಾರ ರಚನೆಯಲ್ಲಿ ಮಹತ್ವದ ಪಾತ್ರ ವಹಿಸಿದ್ದ ಟಿಡಿಪಿಗೆ ದೇಶದ ರಾಜಕೀಯ ಚಿತ್ರಣವನ್ನೇ ಬದಲಾಯಿಸುವ ಶಕ್ತಿ ಇದ್ದು, 2019ರಲ್ಲಿ ಸಮನ ಮನಸ್ಕ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುವ ಮೂಲಕ ಬಿಜೆಪಿ ಅಧಿಕಾರಕ್ಕೆ ಬರದಂತೆ ತಡೆಗಟ್ಟಲಾಗುವುದು ಎಂದರು.
ನರೇಂದ್ರಮೋದಿ ಪ್ರಚಾರದ ಪ್ರಧಾನಿಯಾಗಿದ್ದಾರೆ. ಅವರ ಘೋಷಣೆ ಮಾತ್ರ ನೀಡುತ್ತಾರೆ. ಅಧಿಕಾರಕ್ಕೆ ಬರುವ ಮುನ್ನ ಜನತೆಗೆ ನೀಡಿದ್ದ ಭರವಸೆ ಈಡೇರಿಸುವಲ್ಲಿ ವಿಫಲರಾಗಿದ್ದು, 2019ರಲ್ಲಿ ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಬರುವುದು ಕನಸಿನ ಮಾತು ಎಂದರು.
ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡದಿದ್ದಕ್ಕೆ ಎನ್ ಡಿ ಎ ಮೈತ್ರಿಕೂಟದಿಂದ ಟಿಡಿಪಿ ಹೊರಬಂದಿತ್ತು ಎಂದು ತಿಳಿಸಿದ ಚಂದ್ರಬಾಬು ನಾಯ್ಡು, ಬಿಜೆಪಿ ವೈಎಸ್ ಆರ್ ಸಿ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡು ಆಂಧ್ರಪ್ರದೇಶದ ಜನತೆಗೆ ದ್ರೋಹ ಬಗೆದಿದೆ ಎಂದು ಆರೋಪಿಸಿದರು.