ಪಂಡಿತ್ ನೆಹರೂ 54ನೇ ಪುಣ್ಯ ದಿನ: ಪ್ರಧಾನಿ ಮೋದಿ ಸ್ಮರಣೆ
ನವದೆಹಲಿ: ಇಂದು ಭಾರತದ ಪ್ರಥಮ ಪ್ರಧಾನಿ ಜವಹರಲಾಲ್ ನೆಹರೂ 54ನೇ ಪುಣ್ಯ ದಿನ. ಪ್ರಧಾನಮಂತ್ರಿ ನರೇಂದ್ರ ಮೋದಿ ಪಂಡಿತ್ ನೆಹರೂ ಅವರ ಪುಣ್ಯ ದಿನದಂದು ಅವರನ್ನು ಸ್ಮರಿಸಿ ಟ್ವೀಟ್ ಮಾಡಿದ್ದಾರೆ.
"ನಮ್ಮ ಮೊದಲ ಪ್ರಧಾನಿ ಜವಹರಲಾಲ್ ನೆಹರೂ ಅವರ ಪುಣ್ಯದಿನದ ಸಂದರ್ಭದಲ್ಲಿ ಅವರಿಗೆ ನನ್ನ ನಮನಗಳು" ಎಂದು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಬರೆದುಕೊಂಡಿರುವ ಪ್ರಧಾನಿ ಮೋದಿ, ನೆಹರೂ ಅವರಿಗೆ ಗೌರವ ಸಲ್ಲಿಸಿದ್ದಾರೆ.
ಏತನ್ಮಧ್ಯೆ ರಾಜ್ ಘಾಟ್ ಗೆ ತೆರಳಿದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನೆಹರು ಅವರಿಗೆ ಗೌರವ ಸಲ್ಲಿಸಿದರು.
ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಸಕ್ರಿಯ ಪಾತ್ರ ವಹಿಸಿದ್ದ ಪಂಡಿತ್ ನೆಹರೂ ಭಾರತದ ಪ್ರಥಮ ಪ್ರಧಾನಿಯಾಗಿ ಕಾರ್ಯನಿರ್ವಹಿಸಿದ್ದರು. ಅವರು ಮೇ 27, 1964 ರಂದು ನಿಧನರಾದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics