ದೇಶ

ದೆಹಲಿಯಲ್ಲಿ ಪ್ರಧಾನಿ ಮೋದಿ-ಎಚ್‌ಡಿಕೆ ಭೇಟಿ, ಮಹದಾಯಿ ಸೇರಿ ಅನೇಕ ವಿಚಾರ ಚರ್ಚೆ

Raghavendra Adiga
ನವದೆಹಲಿ: ಕರ್ನಾಟಕದ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ತಾವು ಮುಖ್ಯಮಂತ್ರಿಯಾದ ಬಳಿಕ ಪ್ರಥಮ ಬಾರಿಗೆ ಪ್ರಧಾನಿ ಮೋದಿಯವರನ್ನು ಭೇಟಿಯಾದರು. 
ಸೋಮವಾರ ಬೆಳಿಗ್ಗೆ ನವದೆಹಲಿಗೆ ಆಗಮಿಸಿದ ಕುಮಾರಸ್ವಾಮಿ ಸಂಜೆ ದೆಹಲಿಯ ಲೋಕಕಲ್ಯಾಣ ಮಾರ್ಗದಲ್ಲಿರುವ ಮೋದಿ ನಿವಾಸದಲ್ಲಿ ಪ್ರಧಾನಿಗಳ ಭೇಟಿ ಮಾಡಿ ಮಹದಾಯಿ, ಕಾವೇರಿ ಹಾಗೂ ಸಾಲ ಮನ್ನಾ ವಿಚಾರ ಕುರಿತು ಚರ್ಚಿಸಿದ್ದಾರೆ. 
ರಾಜ್ಯಕ್ಕೆ ಕೇಂದ್ರ ಸರ್ಕಾರದ ಬೆಂಬಲ ನೀಡಬೇಕೆಂದು ಪ್ರಧಾನಿಗಳನ್ನು ಕೋರಿದ್ದಾಗಿ ಕುಮಾರಸ್ವಾಮಿ ಹೇಳಿದ್ದು ಮಹದಾಯಿ ವಿವಾದ ಸಂಬಂಧ ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕರೆಯಲು ಪ್ರಧಾನಿಯವರಲ್ಲಿ ಮನವಿ ಮಾಡಿದ್ದಾಗಿ ತಿಳಿಸಿದರು. 
"ಗುಜರಾತ್ ನಲ್ಲಿ ನರೇಂದ್ರ ಮೋದಿ ಸಹ ಸುದೀರ್ಘ ಕಾಲ ಮುಖ್ಯಮಂತ್ರಿಗಳಗಿದ್ದರು, ಅವರು ತಮ್ಮ ಅನುಭವದ ಆಧಾರದಲ್ಲಿ ಕೆಲ ಸಲಹೆ ನೀಡಿದ್ದಾರೆ. ನಾನು ಅವರಿಗೆ ಧನ್ಯವಾದ ಸಮರ್ಪಿಸುವೆ"  ಅವರು ಹೇಳಿದ್ದಾರೆ.
ರಾಜ್ಯದ ಶಾಖೋತ್ಪನ್ನ ವಿದ್ಯುತ್ ಘಟಕಗಳಲ್ಲಿ ವಿದ್ಯುತ್ ಉತ್ಪಾದಿಸಲು ಕಲ್ಲಿದ್ದಿಲಿನ ಅಗತ್ಯವಿದೆ. ಹೀಗಾಗಿ ಕೇಂದ್ರ ಸರ್ಕಾರ ರಾಜ್ಯಕ್ಕೆ ಅಗತ್ಯಕ್ಕೆ ತಕ್ಕ ಕಲ್ಲಿದ್ದಲು ಪೂರೈಸುವಂತೆ ಪ್ರಧಾನಿಗಳಲ್ಲಿ ಮನವಿ ಮಾಡಿದ್ದೇನೆ ಎಂದರು.
ಇದಕ್ಕೂ ಮುನ್ನ ಮುಖ್ಯಮಂತ್ರಿಗಳು ದೆಹಲಿಯ ರಾಜ್ ಘಾಟ್ ಗೆ ತೆರಳಿ ಮಹಾತ್ಮಾ ಗಾಂಧಿ ಸಮಾಧಿಗೆ ಹೂಗುಚ್ಚ ಇಟ್ಟು ನಮನ ಸಲ್ಲಿಸಿದ್ದರು.
SCROLL FOR NEXT