ನವದೆಹಲಿ: ನಾಗ್ಪುರದಲ್ಲಿ ನಡೆಯುವ ರಾಷ್ಟ್ರೀಯ ಸ್ವಯಂ ಸೇವಕ ಸಂಘದ(ಆರ್ ಎಸ್ಎಸ್) ಸಂಘ ಶಿಕ್ಷಾ ವರ್ಗದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಲು ಒಪ್ಪಿಕೊಂಡಿರುವ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರನ್ನು ಸಂಘ ಹಾಡಿ ಹೊಗಳಿದೆ.
ಪ್ರಣಬ್ ಮುಖರ್ಜಿ ಅವರು ನಮ್ಮ ಆಹ್ವಾನವನ್ನು ಒಪ್ಪಿಕೊಂಡಿರುವುದು ಅವರ ದೊಡ್ಡತನವನ್ನು ತೋರಿಸುತ್ತದೆ ಎಂದು ಆರ್ ಎಸ್ ಎಸ್ ಇಂದು ಪ್ರಕಟಣೆಯಲ್ಲಿ ತಿಳಿಸಿದೆ.
ಪ್ರತಿಬಾರಿ ನಾವು ಸಮಾಜದ ಗಣ್ಯ ವ್ಯಕ್ತಿಗಳನ್ನು ಕಾರ್ಯಕ್ರಮಕ್ಕೆ ಆಹ್ವಾನಿಸುತ್ತೇವೆ. ಆದರೆ ಈ ಬಾರಿ ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರನನ್ನು ಆಹ್ವಾನಿಸಿರುವುದು ಎಲ್ಲರಿಗೂ ಅಚ್ಚರಿ ಮೂಡಿಸಿದೆ. ಆದರೆ ಆಹ್ವಾನ ಒಪ್ಪಿಕೊಂಡಿರುವುದು ಅವರ ಗ್ರೇಟ್ ನೆಸ್ ಎಂದು ಸಂಘ ಹೇಳಿದೆ.
ಜೂನ್ 7ರಂದು ಆರ್ ಎಸ್ಎಸ್ ನ ಪ್ರಧಾನ ಕಚೇರಿ ನಾಗ್ಪುರದಲ್ಲಿ ಈ ಕಾರ್ಯಕ್ರಮ ನಡೆಯುತ್ತಿದ್ದು, ಸಂಘದ ನಡೆಯ ಬಗ್ಗೆ ವ್ಯಾಪಕ ಕುತೂಹಲ ಹುಟ್ಟಿಕೊಂಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics