ಸುಷ್ಮಾ ಸ್ವರಾಜ್ 
ದೇಶ

ನೇಪಾಳದಲ್ಲಿ ಮೋದಿ ಭಾರತೀಯರನ್ನುದ್ದೇಶಿ ಮಾತನಾಡಿದ್ದರು ಹೇಳಿಕೆ: ಸುಷ್ಮಾ ಕ್ಷಮೆ

ಇತ್ತೀಚೆಗೆ ನೇಪಾಳ ಪ್ರವಾಸದಲ್ಲಿದ್ದ ಪ್ರಧಾನಿ ನರೇಂದ್ರ ಮೋದಿ ಜನಕ್ ಪುರದಲ್ಲಿ ಲಕ್ಷಾಂತರ ಭಾರತೀಯರನ್ನುದ್ದೇಶಿಸಿ ಮಾತನಾಡಿದ್ದರು ಎಂಬ ಹೇಳಿಕೆಗೆ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಕ್ಷಮೆ

ಇತ್ತೀಚೆಗೆ ನೇಪಾಳ ಪ್ರವಾಸದಲ್ಲಿದ್ದ ಪ್ರಧಾನಿ ನರೇಂದ್ರ ಮೋದಿ ಜನಕ್ ಪುರದಲ್ಲಿ ಲಕ್ಷಾಂತರ ಭಾರತೀಯರನ್ನುದ್ದೇಶಿಸಿ ಮಾತನಾಡಿದ್ದರು ಎಂಬ ಹೇಳಿಕೆಗೆ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಕ್ಷಮೆ ಕೇಳಿದ್ದಾರೆ.
ಟ್ವಿಟರ್ ನಲ್ಲಿ ಕ್ಷಮೆ ಕೇಳಿರುವ ಸುಷ್ಮಾ ಸ್ವರಾಜ್, ಪ್ರಧಾನಿ ನರೇಂದ್ರ ಮೋದಿ ಜನಕ್ ಪುರದಲ್ಲಿ ಮಾತನಾಡಿದ್ದು ನೇಪಾಳದ ಜನತೆಯನ್ನುದ್ದೇಶಿಸಿಯೇ ಹೊರತು ಭಾರತೀಯರನ್ನುದ್ದೇಶಿಸಿ ಅಲ್ಲ. ಆದರೆ ಭಾರತೀಯರನ್ನುದ್ದೇಶಿಸಿ ಮೋದಿ ಭಾಷಣ ಮಾಡಿದ್ದರು ಎಂದು ಸುಷ್ಮಾ ಸ್ವರಾಜ್ ವಿಡಿಯೋ ಸಹಿತ ಟ್ವೀಟ್ ಮಾಡಿದ್ದರು. ಇದನ್ನು ನೇಪಾಳದ ಸಂಸತ್ ಸದಸ್ಯರೂ ಗಮನಿಸಿದ್ದರು. ನಂತರ ಅದು ಸುಳ್ಳು ಎಂದು ತಿಳಿದುಬಂದಿದ್ದು, ಸುಷ್ಮಾ ಸ್ವರಾಜ್ ಕ್ಷಮೆ ಕೇಳಿದ್ದಾರೆ. 
ಎನ್ ಡಿಎ ಸರ್ಕಾರ 4  ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ್ದ ಸುಷ್ಮಾ ಸ್ವರಾಜ್ ಪ್ರಧಾನಿ ನರೇಂದ್ರ ಮೋದಿ ಅವರು ಅನಿವಾಸಿ ಭಾರತೀಯರನ್ನು ತಲುಪುವುದಕ್ಕೆ ಪ್ರಯತ್ನಿಸುತ್ತಿರುವುದರ ಬಗ್ಗೆ ಹೇಳಿದ್ದರು. ಈ ವೇಳೆ ನೇಪಾಳದಲ್ಲಿ ಮೋದಿ ಭಾರತೀಯರನ್ನುದ್ದೇಶಿಸಿ ಮಾತನಾಡಿದ್ದರು ಎಂದಿದ್ದರು. ಈ ಹೇಳಿಕೆಗೆ ನೇಪಾಳದ ಕಾಂಗ್ರೆಸ್ ನಾಯಕ, ಸಂಸದ ಗಗನ್ ಥಾಪ ಆಕ್ಷೇಪ ವ್ಯಕ್ತಪಡಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ರಾಜ್ಯದಲ್ಲಿ ಶೇ. 90ರಷ್ಟು ಬೆಳೆ ಹಾನಿ: ಪರಿಸ್ಥಿತಿ ಗಂಭೀರ - DCM ಪರಮೇಶ್ವರ

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ಕಾರ್ಮಿಕರ ಆರೋಗ್ಯ ತಪಾಸಣೆ ಹೆಸರಲ್ಲಿ 800 ಕೋಟಿ ರೂ. ಲೂಟಿ; ಸಂತೋಷ್ ಲಾಡ್ ರಾಜೀನಾಮೆಗೆ ಆರಗ ಜ್ಞಾನೇಂದ್ರ ಆಗ್ರಹ