ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಿಂದ ದೇಶದ ಆರ್ಥಿಕತೆ ಮೇಲೆ ಪರಿಣಾಮವಿಲ್ಲ; ರಾಜನಾಥ ಸಿಂಗ್
ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಿಂದ ದೇಶದ ಆರ್ಥಿಕತೆ ಮೇಲೆ ಯಾವುದೇ ರೀತಿಯ ಪರಿಣಾಮ ಬೀರಿಲ್ಲ ಎಂದು ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಅವರು ಗುರುವಾರ ಹೇಳಿದ್ದಾರೆ...
ಭೋಪಾಲ್; ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಿಂದ ದೇಶದ ಆರ್ಥಿಕತೆ ಮೇಲೆ ಯಾವುದೇ ರೀತಿಯ ಪರಿಣಾಮ ಬೀರಿಲ್ಲ ಎಂದು ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಅವರು ಗುರುವಾರ ಹೇಳಿದ್ದಾರೆ.
ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಎರಿಕೆಯಿಂದಾಗಿ ದೇಶದಾದ್ಯಂತ ಭಾರೀ ವಿರೋದ ಹಾಗೂ ಟೀಕೆಗಳು ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಏರಿಕೆಯಾಗಿದ್ದು, ಇದರ ಪರಿಣಾಮದಿಂದಾಗಿ ದೇಶದಲ್ಲಿರುವ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಕೂಡ ಏರಿಕೆಯಾಗಿದೆ ಎಂದು ಹೇಳಿದ್ದಾರೆ.
ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆಯಿಂದ ದೇಶದ ಆರ್ಥಿಕತೆಯ ಮೇಲೆ ಯಾವುದೇ ರೀತಿಯ ಪರಿಣಾಮಗಳು ಬೀರಿಲ್ಲ. ಸಾರ್ವಜನಿಕರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸಲು ನಮ್ಮ ಸರ್ಕಾರ ಸತತ ಯತ್ನ ಮಾಡುತ್ತಿದೆ ಎಂದು ತಿಳಿಸಿದ್ದಾರೆ.