ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಯಲ್ಲಿ ಇಬ್ಬರು ಉಗ್ರರನ್ನು ಭಾರತೀಯ ಯೋಧರು ಹೊಡೆದುರುಳಿಸಿದ್ದಾರೆ.
ಇಬ್ಬರಿಬ್ಬರು ಯಾವ ಉಗ್ರ ಸಂಘಟನೆಗೆ ಸೇರಿದವರು ಎಂದು ತಿಳಿದುಬಂದಿಲ್ಲ. ಕುಪ್ವಾರ ಜಿಲ್ಲೆಯ ಗಾಜಿಯಾಬಾದ್ ಅರಣ್ಯ ಪ್ರದೇಶದಲ್ಲಿ ಭಾರತೀಯ ಯೋಧರು ಕಾರ್ಯಾಚರಣೆ ನಡೆಸುತ್ತಿದ್ದು ಈ ವೇಳೆ ಭಾರತೀಯ ಯೋಧರ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ.
ಉಗ್ರರ ದಾಳಿಗೆ ಪ್ರತಿಯಾಗಿ ಭಾರತೀಯ ಯೋಧರು ನಡೆಸಿದ ಗುಂಡಿನ ದಾಳಿಯಲ್ಲಿ ಇಬ್ಬರು ಉಗ್ರರು ಬಲಿಯಾಗಿದ್ದಾರೆ. ಇನ್ನು ಉಗ್ರರ ವಿರುದ್ಧದ ಕಾರ್ಯಾಚರಣೆ ಮುಂದುವರೆದಿದೆ.