ಉದ್ದವ್ ಠಾಕ್ರೆ 
ದೇಶ

ರಾಮ ಮಂದಿರ ಸುಳ್ಳಿನ ಭರವಸೆಯಾದರೆ ಬಿಜೆಪಿಗೆ 280 ರಿಂದ 2 ಲೋಕಸಭಾ ಸ್ಥಾನ- ಉದ್ದವ್ ಠಾಕ್ರೆ

ಬಿಜೆಪಿ ನೀಡಿರುವ ರಾಮ ಮಂದಿರ ನಿರ್ಮಾಣ ಭರವಸೆ ಸುಳ್ಳಾದರೆ, 280 ರಿಂದ 2 ಲೋಕಸಭಾ ಸ್ಥಾನಗಳನ್ನು ಪಡೆಯಬೇಕಾಗುತ್ತದೆ ಎಂದು ಶಿವಸೇನಾ ಮುಖ್ಯಸ್ಥ ಉದ್ದವ್ ಠಾಕ್ರೆ ಎಚ್ಚರಿಕೆ ನೀಡಿದ್ದಾರೆ.

ಮುಂಬೈ:  ಬಿಜೆಪಿ ನೀಡಿರುವ ರಾಮ ಮಂದಿರ ನಿರ್ಮಾಣ ಭರವಸೆ ಸುಳ್ಳಾದರೆ, 280 ರಿಂದ 2 ಲೋಕಸಭಾ ಸ್ಥಾನಗಳನ್ನು ಪಡೆಯಬೇಕಾಗುತ್ತದೆ ಎಂದು  ಶಿವಸೇನಾ ಮುಖ್ಯಸ್ಥ ಉದ್ದವ್ ಠಾಕ್ರೆ ಎಚ್ಚರಿಕೆ ನೀಡಿದ್ದಾರೆ.

ರಾಯಗಡ ಜಿಲ್ಲೆಯ ಮಹದ್ ನಲ್ಲಿ ಪಕ್ಷದ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಅವರು, ಅಯೋಧ್ಯೆಯಲ್ಲಿ ರಾಮ ಮಂದಿ ನಿರ್ಮಾಣಕ್ಕಾಗಿ ಇಟ್ಟಿಗೆ ಸಂಗ್ರಹಿಸಲಾಗಿದೆ. ಆದರೆ, ವಾಸ್ತವವಾಗಿ ಇದು ದೇಗುಲ ನಿರ್ಮಾಣಕ್ಕಾಗಿ ಅಲ್ಲ, ಅಧಿಕಾರಕ್ಕಾಗಿ ತೆಗೆದುಕೊಂಡ ಕ್ರಮಗಳು ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಮಹಾರಾಷ್ಟ್ರ ಹಾಗೂ ಕೇಂದ್ರದಲ್ಲಿ ಬಿಜೆಪಿ ಹಾಗೂ ಶಿವಸೇನಾ ಮೈತ್ರಿ ಮಾಡಿಕೊಂಡಿವೆ. ಆದರೆ, ಹಲವು ವಿಷಯಗಳಲ್ಲಿ ಬಿಜೆಪಿ ವಿರುದ್ಧ ನಿರಂತರವಾಗಿ  ಉದ್ದವ್ ಠಾಕ್ರೆ ವಾಗ್ದಾಳಿ ನಡೆಸುತ್ತಿದ್ದಾರೆ. ಪ್ರಸ್ತುತ ಬಿಜೆಪಿ ಲೋಕಸಭೆಯಲ್ಲಿ 272 ಸದಸ್ಯರನ್ನು ಹೊಂದಿದೆ.

ಪ್ರಸ್ತುತ ದೇಶದಲ್ಲಿ ಆಡಳಿತ ವಾತವಾರಣ ಹಾಗೂ ರಾಜಕೀಯ ಕುಸಿದಿದ್ದು, ಮುಂದಿನ ಲೋಕಸಭಾ ಚುನಾವಣೆಗಾಗಿ ಹೋರಾಟ ಆರಂಭವಾಗಿದೆ. ಏನಾಗುತ್ತದೆ ಎಂಬುದು ಗೊತ್ತಿಲ್ಲ. ಆದರೆ, ದೇಶ ಹಾಗೂ ದೇಶದ ಜನರಿಗೆ ಏನು ಆಗಬಹುದು ಎಂದರು.

ರಾಜ್ಯದಲ್ಲಿನ ಬರ ಪೀಡಿತ ಪ್ರದೇಶಗಳ ಪರಾಮರ್ಶೆನೆಗಾಗಿ ತಾವೂ ಪ್ರವಾಸ ಕೈಗೊಂಡರೆ ಪ್ರಧಾನಿ ವಿದೇಶಿ ಪ್ರವಾಸದಲ್ಲಿ ಬ್ಯೂಸಿಯಾಗಿರುತ್ತಾರೆ. ಸುಳ್ಳಿನ ಭರವಸೆ ನೀಡಿದರೆ ತಾವೂ ಬಿಜೆಪಿ ಪರ ಮತಯಾಚಿಸುವುದಿಲ್ಲ ಎಂದು ಉದ್ದವ್ ಠಾಕ್ರೆ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮತ ಬೇಟೆ ತಡೆಯಲು 'ಕೈ' ಕಲಿಗಳ ಮಾಸ್ಟರ್ ಪ್ಲ್ಯಾನ್: ಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಮಹತ್ವದ ಸಭೆ, ಬೂತ್ ಮಟ್ಟದಲ್ಲಿ ಸಮರಕ್ಕೆ ಸಜ್ಜು..!

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!