ದೇಶ

ಅಸ್ಸಾಂನಲ್ಲಿ ಉಲ್ಫಾ ಉಗ್ರರಿಂದ ಭೀಕರ ದಾಳಿ, 5 ಮಂದಿ ಸಾವು!

Srinivasamurthy VN
ಗುವಾಹತಿ: ಅಸ್ಸಾಂನಲ್ಲಿ ಉಲ್ಫಾ ಉಗ್ರರ ಮತ್ತೆ ತಮ್ಮ ಅಟ್ಟಹಾಸ ಮೆರೆದಿದ್ದು, ಬೆಂಗಾಲಿ ಸಮುದಾಯವನ್ನು ಗುರಿಯಾಗಿಸಿಕೊಂಡು ನಡೆಸಿದ ದಾಳಿಯಲ್ಲಿ ಕನಿಷ್ಠ 5 ಮಂದಿ ಸಾವಿಗೀಡಾಗಿದ್ದಾರೆ ಎಂದು ತಿಳಿದುಬಂದಿದೆ.
ಅಸ್ಸಾಂ ತಿನ್ಸುಕಿಯಾದ ಧೋಲಾ-ಸಾದಿಯಾ ಬ್ರಿಡ್ದ್ ಬಳಿ ಘಟನೆ ನಡೆದಿದ್ದು, ಶಸ್ತ್ರಧಾರಿ ಉಗ್ರರು ಏಕಾಏಕಿ ಜನ ಸಮೂಹದ ಮೇಲೆ ಗುಂಡಿನ ಮಳೆಗರೆದಿದ್ದಾರೆ. ಪರಿಣಾಮ ಘಟನೆಯಲ್ಲಿ  ಮಂದಿ ಸ್ಥಳದಲ್ಲಿ ಸಾವನ್ನಪ್ಪಿ ಹಲವರು ಗಾಯಗೊಂಡಿದ್ದಾರೆ.
ಇನ್ನು ಮೃತರನ್ನು ಸ್ಥಳೀಯ ನಿವಾಸಿಗಳಾದ ಶ್ಯಾಮಲ್ ಬಿಸ್ವಾಸ್, ಅನನಿಯಾ ಬಿಸ್ವಾಸ್, ಅಬಿನಾಶ್ ಬಿಸ್ವಾಸ್, ಸುಬಲ್ ಬಿಸ್ವಾಸ್ ಮತ್ತು ಧನಂಜಯ್ ನಮ್ಮುದದ್ರಾ ಎಂದು ಗುರುತಿಸಲಾಗಿದೆ. ಪೊಲೀಸ್ ಮೂಲಗಳು ತಿಳಿಸಿರುವಂತೆ ಉಲ್ಫಾ ಉಗ್ರ ಸಂಘಟನೆ ಮುಖಂಡ ಪರೇಶ್ ಬರುವ್ಙಾ ನೇತೃತ್ವದಲ್ಲಿ ಈ ದಾಳಿ ನಡೆದಿದೆ ಎಂದು ಶಂಕಿಸಲಾಗಿದೆ. ದಾಳಿ ಬಳಿಕ ಅಸ್ಸಾಂ ಮತ್ತು ಪಶ್ಚಿಮ ಬಂಗಾಳದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.
ಇನ್ನು ಘಟನೆಯನ್ನು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ತೀವ್ರವಾಗಿ ಖಂಡಿಸಿದ್ದು, ಘಟನೆಯನ್ನು ವಿರೋಧಿಸಿ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಪ್ರತಿಕ್ರಿಯಿಸಿದ್ದು, ಘಟನೆ ಸಂಬಂಧ ಅಸ್ಸಾಂ ಸರ್ಕಾರದಿಂದ ವರದಿ ಕೇಳಲಾಗಿದೆ ಎಂದು ಹೇಳಿದ್ದಾರೆ. ಅಲ್ಲದೆ ಘಟನೆಯನ್ನು ಟ್ವಿಟರ್ ನಲ್ಲಿ ಕಟು ಶಬ್ಧಗಳಿಂದ ವಿರೋಧಿಸಿದ್ದಾರೆ.
SCROLL FOR NEXT