ಯೋಗಿ ಆದಿತ್ಯನಾಥ್ 
ದೇಶ

ಪಟೇಲರ ಪ್ರತಿಮೆಯಂತೆ ಯುಪಿಯಲ್ಲಿ 100 ಅಡಿ ಎತ್ತರದ ಶ್ರೀರಾಮನ ಪ್ರತಿಮೆ ಪ್ರತಿಷ್ಠಾಪನೆಗೆ ಸಿಎಂ ಯೋಗಿ ಚಿಂತನೆ!

ಗುಜರಾತ್ ನಲ್ಲಿ ಉಕ್ಕಿನ ಮನುಷ್ಯ ಖ್ಯಾತಿಯ ಸರ್ದಾರ್ ವಲ್ಲಭಾಯ್ ಪಟೇಲರ ಪ್ರತಿಮೆ ಪ್ರತಿಷ್ಠಾಪನೆಯಂತೆ ಉತ್ತರಪ್ರದೇಶದಲ್ಲಿ 100 ಅಡಿ ಎತ್ತರದ ಶ್ರೀರಾಮನ ಪ್ರತಿಮೆ...

ಗುಜರಾತ್ ನಲ್ಲಿ ಉಕ್ಕಿನ ಮನುಷ್ಯ ಖ್ಯಾತಿಯ ಸರ್ದಾರ್ ವಲ್ಲಭಾಯ್ ಪಟೇಲರ ಪ್ರತಿಮೆ ಪ್ರತಿಷ್ಠಾಪನೆಯಂತೆ ಉತ್ತರಪ್ರದೇಶದಲ್ಲಿ 100 ಅಡಿ ಎತ್ತರದ ಶ್ರೀರಾಮನ ಪ್ರತಿಮೆ ಪ್ರತಿಷ್ಠಾಪನೆ ಮಾಡಲು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಚಿಂತನೆ ನಡೆಸಿದ್ದಾರೆ. 
ಅಯೋಧ್ಯೆ ರಾಮ ಜನ್ಮಭೂಮಿ ಒಡೆತನದ ವಿವಾದದ ವಿಚಾರಣೆಯನ್ನು ಸುಪ್ರೀಂ ಕೋರ್ಟ್ 2019ರ ಜನವರಿಗೆ ಮುಂದೂಡಿದ ಎರಡೇ ದಿನಗಳ ತರುವಾಯ ಪಾಂಡೆ ಈ ಹೇಳಿಕೆ ನೀಡಿರುವುದು ಗಮನಾರ್ಹವಾಗಿದೆ. 
ಅಯೋಧ್ಯೆಗೆ ಸಂಬಂಧಿಸಿದಂತೆ ಈ ದೀಪಾವಳಿಗೆ ನೀವು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಂದ ಕೆಲವು ಮಹತ್ವದ ಪ್ರಕಟನೆಗಳನ್ನು ಕೇಳಬಹುದಾಗಿದೆ ಎಂದು ಉತ್ತರ ಪ್ರದೇಶ ಬಿಜೆಪಿ ಮುಖ್ಯಸ್ಥ ಮಹೇಂದ್ರನಾಥ್ ಪಾಂಡೆ ಹೇಳಿದ್ದಾರೆ. 
ಈ ಬಗ್ಗೆ ಹೆಚ್ಚಿನ ಮಾಹಿತಿ ನೀಡಲು ನಿರಾಕರಿಸಿದ ಪಾಂಡೆ, ಅದನ್ನು ಮಹಾನ್ ಸಂತ, ಯೋಗಿ ಆದಿತ್ಯನಾಥ್ ಅವರೇ ಪ್ರಕಟಿಸುವುದು ಸೂಕ್ತ ಎಂದು ಹೇಳಿದ್ದಾರೆ. 
ಸಿಎಂ ಯೋಗಿ ಆದಿತ್ಯನಾಥ್ ಅವರು ಶಾಂತಿ ಮತ್ತು ಸಹೋದರತೆಗಾಗಿ ಅಯೋಧ್ಯೆ ವಿವಾದವನ್ನು ಕ್ಲಪ್ತವಾಗಿ ಇತ್ಯರ್ಥಪಡಿಸುವ ಅಗತ್ಯವಿದೆ ಎಂದು ಹೇಳಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಬ್ರೇಕ್ ಫಾಸ್ಟ್ ಮೀಟಿಂಗ್: ಮುಂದಿನ CM ಡಿಕೆ.ಶಿವಕುಮಾರ್; ಸಚಿವರಿಗೆ ಸಿದ್ದರಾಮಯ್ಯ ಮಾಹಿತಿ

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಕಾಂಗ್ರೆಸ್‌ ಪವರ್ ಪಾಲಿಟಿಕ್ಸ್‌ಗೆ ಮತ್ತೊಂದು ಟ್ವಿಸ್ಟ್: ರಾಜ್ಯಪಾಲರ ಭೇಟಿಗೆ ಸಿದ್ದರಾಮಯ್ಯ ಸಮಯ ಕೇಳಿಲ್ಲ; ರಾಜೀನಾಮೆ ಊಹಾಪೋಹಕ್ಕೆ ಲೋಕಭವನ ಸ್ಪಷ್ಟನೆ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

SCROLL FOR NEXT