ಸಾಂದರ್ಭಿಕ ಚಿತ್ರ 
ದೇಶ

ಪ್ರೀತಿಗೆ ನಿರಾಕರಣೆ, ವಿದ್ಯಾರ್ಥಿನಿಯ ಕತ್ತು ಸೀಳಿದ ಧೂರ್ತ ಶಿಕ್ಷಕ!

ತನ್ನ ಪ್ರೀತಿಯನ್ನು ನಿರಾಕರಿಸಿದಳು ಎಂಬ ಒಂದೇ ಕಾರಣಕ್ಕೆ ಶಿಕ್ಷಕನೋರ್ವ 9ನೇ ತರಗತಿ ವಿದ್ಯಾರ್ಥಿನಿಯ ಕತ್ತು ಸೀಳಿರುವ ಘಟನೆ ಆಂಧ್ರ ಪ್ರದೇಶದ ಕರ್ನೂಲು ಜಿಲ್ಲೆಯಲ್ಲಿ ನಡೆದಿದೆ.

ಕರ್ನೂಲು: ತನ್ನ ಪ್ರೀತಿಯನ್ನು ನಿರಾಕರಿಸಿದಳು ಎಂಬ ಒಂದೇ ಕಾರಣಕ್ಕೆ ಶಿಕ್ಷಕನೋರ್ವ 9ನೇ ತರಗತಿ ವಿದ್ಯಾರ್ಥಿನಿಯ ಕತ್ತು ಸೀಳಿರುವ ಘಟನೆ ಆಂಧ್ರ ಪ್ರದೇಶದ ಕರ್ನೂಲು ಜಿಲ್ಲೆಯಲ್ಲಿ ನಡೆದಿದೆ.
ಕರ್ನೂಲು ಜಿಲ್ಲೆಯ ಬಂಗಾರುಪೇಟ ಎಂಬ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಸ್ಥಳೀಯ ರಾಕ್ ವೆಲ್ ಹೈ ಸ್ಕೂಲ್ ನ ಹಿಂದಿ ಶಿಕ್ಷಕ ಶಂಕರ್ ಎಂಬಾತ ಈ ಕೃತ್ಯವೆಸಗಿದ್ದಾನೆ. ಕಳೆದ ಹಲವು ದಿನಗಳಿಂದ ವಿದ್ಯಾರ್ಥಿನಿಯ ಹಿಂದೆ ಬಿದ್ದಿದ್ದ ಶಂಕರ್ ತನ್ನನ್ನು ಪ್ರೀತಿಸುವಂತೆ ವಿದ್ಯಾರ್ಥಿನಯ ದುಂಬಾಲು ಬಿದ್ದಿದ್ದ. ಆದರೆ ಇದಕ್ಕೆ ಆಕೆ ಒಪ್ಪಿರಲಿಲ್ಲ.
ಇಂದು ನೇರವಾಗಿ ವಿದ್ಯಾರ್ಥಿನಿಯ ಮನೆಗೆ ತೆರಳಿದ್ದ ಶಂಕರ್ ಕೊನೆಯ ಬಾರಿಗೆ ಆಕೆಯಲ್ಲಿ ತನ್ನ ಪ್ರೇಮ ನಿವೇದನೆ ಮಾಡಿದ್ದಾನೆ. ಅದಕ್ಕೂ ಆಕೆ ಒಪ್ಪದಿದ್ದಾಗ ಆಕ್ರೋಶಗೊಂಡ ಆತ ತಾನು ತಂದಿದ್ದ ಚಾಕುವಿನಿಂದ ಆಕೆಯ ಕತ್ತು ಸೀಳಿದ್ದಾನೆ. ಬಳಿಕ ತನ್ನ ಕತ್ತನ್ನೂ ಕೂಡ ಸೀಳಿಕೊಂಡಿದ್ದಾನೆ. ಈ ವೇಳೆ ವಿದ್ಯಾರ್ಥಿನಿಯ ಆಕ್ರಂಧನ ಕೇಳಿದ ಸ್ಥಳೀಯರು ಓಡಿ ಬಂದಿದ್ದು, ಕೂಡಲೇ ಶಂಕರ್ ನನ್ನು ಹಿಡಿದು ಥಳಿಸಿದ್ದಾರೆ. ಅಲ್ಲದೇ ರಕ್ತದ ಮಡುವಿನಲ್ಲಿ ಬಿದ್ದಿದ್ದ ಇಬ್ಬರನ್ನೂ ಆಸ್ಪತ್ರೆಗೆ ಸೇರಿಸಿ ಪೊಲೀಸರಿಗೆ ವಿಚಾರ ಮುಟ್ಟಿಸಿದ್ದಾರೆ.
ಪ್ರಸ್ತುತ ವಿದ್ಯಾರ್ಥಿನಿ ಸ್ಥಿತಿ ಗಂಭೀರವಾಗಿದ್ದು, ಆರೋಪಿ ಶಂಕರ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಇನ್ನು ಈ ವಿಚಾರ ತಿಳಿಯುತ್ತಿದ್ದಂತೆಯೇ ಸ್ಥಳೀಯ ಜಿಲ್ಲಾಡಳಿತ ಆರೋಪಿ ಶಂಕರ್ ನನ್ನು ಅಮಾನತುಗೊಳಿಸಿದೆ. ಪ್ರಕರಣ ದಾಖಲಿಸಿಕೊಂಡಿರುವ ಕರ್ನೂಲು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

ವಿದೇಶಿ ಮಹಿಳೆಗೆ ಪತ್ರ ಬರೆದು ಅಂಬೇಡ್ಕರ್ ಸೋಲನ್ನು ನೆಹರು ಸಂಭ್ರಮಿಸಿದ್ದು ನಿಜವಲ್ಲವೇ? 'ಗೂಗಲ್ ಬೇಬಿ'ಯಂತೆ ವರ್ತಿಸಬೇಡಿ!

SCROLL FOR NEXT