ಶಶಿ ತರೂರ್ 
ದೇಶ

ಮೋದಿಯನ್ನು ಚೇಳಿಗೆ ಹೋಲಿಸಿದ್ದ ಶಶಿ ತರೂರ್ ವಿರುದ್ಧ ಮಾನಹಾನಿ ಪ್ರಕರಣ ದಾಖಲು!

ಪ್ರಧಾನಿ ನರೇಂದ್ರ ಮೋದಿಯವರನ್ನು "ಚೇಳು" ಎಂದುದ್ದ ಕಾಂಗ್ರೆಸ್ ನಾಯಕ ಶಶಿ ತರೂರ್ ವಿರುದ್ಧ ದೆಹಲಿ ನ್ಯಾಯಾಲಯದಲ್ಲಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಾಗಿದೆ.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರನ್ನು "ಚೇಳು" ಎಂದುದ್ದ ಕಾಂಗ್ರೆಸ್ ನಾಯಕ ಶಶಿ ತರೂರ್ ವಿರುದ್ಧ ದೆಹಲಿ ನ್ಯಾಯಾಲಯದಲ್ಲಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಾಗಿದೆ.
ದೆಹಲಿಯ ಭಾರತೀಯ ಜನತಾ ಪಕ್ಷದ ನಾಯಕ ರಾಜೀವ್ ಬಬ್ಬರ್ ಮೊಕದ್ದಮೆ ದಾಖಲಿಸಿದ್ದು ಹಿಂದೂಗಳ ಧಾರ್ಮಿಕ ಭಾವನೆಗೆ ತರೂರ್ ಧಕ್ಕೆ ಉಂಟು ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
"ನಾನೊಬ್ಬ ಶಿವಭಕ್ತನಾಗಿದ್ದೇನೆ.ತರೂರ್ ಕೋಟಿಗಟ್ಟಲೆ ಭಕ್ತರ ಭಾವನೆಗಳನ್ನು ಸಂಪೂರ್ಣವಾಗಿ ಕಡೆಗಣಿಸಿದ್ದಲ್ಲದೆ ಅವರ ಭಾವನೆಗೆ ಘಾಸಿಯುಂಟು ಂಆಡಿದ್ದಾರೆ" ದೂರಿನಲ್ಲಿ ತಿಳಿಸಲಾಗಿದೆ.
ಮಾನನಷ್ಟಕ್ಕೆ ಸಂಬಂಧಿಸಿದ ಭಾರತೀಯ ದಂಡ ಸಂಹಿತೆಯ  ಸೆಕ್ಷನ್ 499 ಮತ್ತು 500 ರ ಅಡಿಯಲ್ಲಿ ದೂರು ಸಲ್ಲಿಸಲಾಗಿದೆ.
ಕಳೆದ ವಾರ ಬೆಂಗಳೂರಿನಲ್ಲಿ ನಡೆದಿದ್ದ ಬೆಂಗಳೂರು ಸಾಹಿತ್ಯೋತ್ಸವದಲ್ಲಿ ಭಾಗವಹಿಸಿದ್ದ ಶಶಿ ತರೂರ್ "ಆರ್.ಎಸ್.ಎಸ್.ಪಾಲಿಗೆ ನರೇಂದ್ರ ಮೋದಿ ಶಿವಲಿಂಗದ ಮೇಲಿನ ಚೇಳಿನಂತೆ ಅದನ್ನು ಬರಿಗೈನಲ್ಲಿ ಸರಿಸಲು ಸಾಧ್ಯವಿಲ್ಲ, ಚಪ್ಪಲಿಯಿಂದ ಹೊಡೆಯಲೂ ಆಗುವುದಿಲ್ಲ" ಎಂದಿದ್ದರು.ಅಲ್ಲದೆ ಮೋದಿಯವರನ್ನು ನಿಯಂತ್ರಿಸಲಾಗದ ಆರ್ ಎಸ್ ಎಸ್ ನಾಯಕರೊಬ್ಬರು ಈ ಮಾತು ಹೇಳಿದ್ದಾರೆ ಎಂದೂ ಉಲ್ಲೇಖಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods|ನೇಪಾಳ-ಟಿಬೆಟ್ ಗಡಿಯಲ್ಲಿ ಭೀಕರ ಪ್ರವಾಹ: ಸಾವಿನ ಸಂಖ್ಯೆ 165ಕ್ಕೆ ಏರಿಕೆ; 300ಕ್ಕೂ ಹೆಚ್ಚು ಭಾರತೀಯರು ನಾಪತ್ತೆ

Toxic Box Office Collection: ಟಾಕ್ಸಿಕ್ ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ? ಕನ್ನಡಕ್ಕಿಂತ ಹಿಂದಿಯಲ್ಲಿ ಡಬಲ್ ಗಳಿಕೆ!

ನೇಪಾಳ ಭೀಕರ ಪ್ರವಾಹದಲ್ಲಿ ಕೊಚ್ಚಿ ಹೋದವು ಒಂಬತ್ತು ಜಲವಿದ್ಯುತ್ ಕೇಂದ್ರಗಳು!

ದಿಢೀರ್‌ ದೆಹಲಿಗೆ ತೆರಳಿದ ನಾಗೇಂದ್ರ; ಹೈಕಮಾಂಡ್ ಅಂಗಳದಲ್ಲಿ ರಾಜೀನಾಮೆ ಭವಿಷ್ಯ!

ಚಾಣಕ್ಯನ ಅರ್ಥಶಾಸ್ತ್ರದಲ್ಲಿ ಸಾಲದ ಪರಿಕಲ್ಪನೆ ಹೀಗಿತ್ತು ! (ಹಣಕ್ಲಾಸು)