ಭೋಪಾಲ್: ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರ ಭಾವ ಮೈದುನ ಸಂಜಯ್ ಸಿಂಗ್ ಮಸಾನಿ ಅವರು ಶನಿವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಚೌಹಾನ್ ಅವರ ಪತ್ನಿ ಸಾಧನಾ, ಮಸಾನಿ ಅವರ ಸೋದರ ಸಂಜಯ್ ಮಧ್ಯಪ್ರದೇಶ ಕಾಂಗ್ರೆಸ್ ಮುಖ್ಯಸ್ಥ ಕಮಲ್ ನಾಥ್ ಉಪಸ್ಥಿತಿಯಲ್ಲಿ ಔಪಚಾರಿಕವಾಗಿ ಪಕ್ಷಕ್ಕೆ ಸೇರಿಸಿಕೊಳ್ಳಲಾಗಿದೆ.
ಸಂಜಯ್ ಮಸಾನಿ ಅವರಿಗೆ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಯಿಂದ ಸ್ಪರ್ಧಿಸಲು ಟಿಕೆಟ್ ಸಿಕ್ಕದ ಕಾರಣ ಅಸಮಾಧಾನಗೊಂಡು ಪಕ್ಷ ತೊರೆದಿದ್ದಾರೆ ಎನ್ನಲಾಗಿದೆ. ಅವರು ಬಾಲಘಾಟ್ ಜಿಲ್ಲೆಯ ವಾರ್ಸೋನಿ ವಿಧಾನಸಭೆ ಕ್ಷೇತ್ರದಿಂದ ಸ್ಪರ್ಧಿಸುವ ಇಚ್ಚೆ ವ್ಯಕ್ತಪಡಿಸಿದ್ದರು. ಆದರೆ ಬಿಜೆಪಿ ಆ ಕ್ಷೇತ್ರದ ಹಾಲಿ ಸದಸ್ಯರಾದ ಯೋಗೇಂದ್ರ ನಿರ್ಮಲ್ ಅವರಿಗೆ ಟಿಕೆಟ್ ನೀಡಿ ಪಕ್ಷದ ಅಭ್ಯರ್ಥಿಯನ್ನಾಗಿಸಿತ್ತು.
ಮಧ್ಯ ಪ್ರದೇಶದಲ್ಲಿ ಬಿಜೆಪಿ ವಂಶವಾಹಿ ಆಡಳಿತವನ್ನು ಉತ್ತೇಜಿಸುತ್ತಿದೆ.ಎಂದು ಸಂಜಯ್ ಆರೋಪಿಸಿದ್ದಾರೆ. ಚುನಾವಣೆಗೆ ಸ್ಪರ್ಧಿಸುತ್ತಿರುವ ಪಕ್ಷದ ಹೆಚ್ಚಿನ ಅಭ್ಯರ್ಥಿಗಳು ಇದಾಗಲೇ ಶಾಸಕರಾಗಿರುವವರ ಪುತ್ರರು ಅಥವಾ ಸಂಸದರ ಪುತ್ರರಾಗಿದ್ದಾರೆ ಎಂದು ಹೇಳಿರುವ ಸಂಜಯ್ ರಾಅಕೀಯವಾಗಿ, ಪಕ್ಷಕ್ಕಾಗಿ ದುಡಿದವರನ್ನು ಕಡೆಗಣಿಸಲಾಗುತ್ತಿದೆ ಎಂದರು.
ಅಧ್ಯಪ್ರದೇಶದಲ್ಲಿ ಚೌಹಾಣ್ ಅಧಿಕಾರ ಕೊನೆಗೊಳಿಸಿ ಕಾಂಗ್ರೆಸ್ ಅಧಿಕಾರಕ್ಕೇರಲು ಇದು ಸೂಕ್ತ ಸಮಯ ಎಂದು ಅವರು ಹೇಳಿದ್ದಾರೆ.
230 ಸದಸ್ಯರ ಮಧ್ಯಪ್ರದೇಶ ವಿಧಾನಸಭೆಗೆ ನವೆಂಬರ್ 28 ರಂದು ಒಂದೇ ಹಂತದ ಮತದಾನ ನಡೆಯಲಿದೆ. ಇದಕ್ಕಾಗಿ ಬಿಜೆಪಿ ಇದಾಗಲೇ 177 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics