ಸಂಗ್ರಹ ಚಿತ್ರ 
ದೇಶ

ರಾಮ ಮಂದಿರ ವಿವಾದ ನ್ಯಾಯಾಲಯದ ಅಂಗಳದಲ್ಲಿದ್ದು, ನಾವೇನೂ ಮಾಡಲು ಸಾಧ್ಯವಿಲ್ಲ: ಉತ್ತರಪ್ರದೇಶ ಉಪ ಮುಖ್ಯಮಂತ್ರಿ

ಅಯೋಧ್ಯೆ ರಾಮ ಮಂದಿರ ವಿವಾದ ನ್ಯಾಯಾಲಯದ ಅಂಗಳದಲ್ಲಿದ್ದು, ಈ ಸಂದರ್ಭದಲ್ಲಿ ನಾವೇನನ್ನೂ ಮಾಡಲು ಸಾಧ್ಯವಿಲ್ಲ ಎಂದು ಉತ್ತರಪ್ರದೇಶ ಉಪ ಮುಖ್ಯಮಂತ್ರಿ ಕೆ.ಪಿ. ಮೌಲ್ಯ ಅವರು ಹೇಳಿದ್ದಾರೆ...

ನವದೆಹಲಿ: ಅಯೋಧ್ಯೆ ರಾಮ ಮಂದಿರ ವಿವಾದ ನ್ಯಾಯಾಲಯದ ಅಂಗಳದಲ್ಲಿದ್ದು, ಈ ಸಂದರ್ಭದಲ್ಲಿ ನಾವೇನನ್ನೂ ಮಾಡಲು ಸಾಧ್ಯವಿಲ್ಲ ಎಂದು ಉತ್ತರಪ್ರದೇಶ ಉಪ ಮುಖ್ಯಮಂತ್ರಿ ಕೆ.ಪಿ. ಮೌಲ್ಯ ಅವರು ಹೇಳಿದ್ದಾರೆ. 
ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಮಾಡುವುದು ನಮ್ಮ ಸರ್ಕಾರ ಪ್ರಮುಖ ಆದ್ಯತೆಯಾಗಿದೆ. ಪ್ರಸ್ತುತ ವಿವಾದ ನ್ಯಾಯಾಲಯದ ಅಂಗಳದಲ್ಲಿದ್ದು, ಈ ಸಂದರ್ಭದಲ್ಲಿ ನಾವೇನನ್ನೂ ಮಾಡಲು ಸಾಧ್ಯವಿಲ್ಲ. ಆದರೆ, ಅಯೋಧ್ಯೆಯಲ್ಲಿ ರಾಮನ ವಿಗ್ರಹ ಪ್ರತಿಷ್ಠಾನೆ ಮಾಡುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಯಾರಾದರೂ ತಡೆಯಲು ಬಂದರೆ ನೋಡೋಣ. ಅಯೋಧ್ಯೆ ಅಭಿವೃದ್ಧಿಪಡಿಸುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಹೇಳಿದ್ದಾರೆ. 
ಈ ಹಿಂದೆ ಹೇಳಿಕೆ ನೀಡಿದ್ದ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು, 2019 ಲೋಕಸಭಾ ಚುನಾವಣೆ ಆರಂಭವಾಗುವುದಕ್ಕೂ ಮುನ್ನವೇ ರಾಮ ಮಂದಿರ ನಿರ್ಮಾಣ ಆರಂಭವಾಗುತ್ತದೆ. ದೇಶದ ಪ್ರಜಾಪ್ರಭುತ್ವ ವ್ಯವಸ್ಥೆ ಮೇಲೆ ನಂಬಿಕೆ ಇಡುವಂತೆ ಹಿಂದೂ ಶ್ರೀಗಳಿಗೆ ತಿಳಿಸಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

BBK 13: ಗಾನವಿ ಹೇಳಿಕೆಗೆ ನೊಂದು ಗಗನ್ ತಾಯಿಗೆ ತಾನೇ ಕ್ಷಮೆ ಕೇಳಿ ಕಣ್ಣೀರು ಹಾಕಿದ ಸುದೀಪ್

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ, ಆಫ್ರಿಕಾಗೆ ಸೂಕ್ತ ಪ್ರಾತಿನಿಧ್ಯ ಸಿಗಲೇಬೇಕು: ಜೈಶಂಕರ್ ಆಗ್ರಹ

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!