ದೇಶ ಉಳಿಸುವ ಮುನ್ನ ನಿಮ್ಮ ಸ್ಥಾನ ಉಳಿಸಿಕೊಳ್ಳಿ: ಆಂಧ್ರ ಸಿಎಂಗೆ ಬಿಜೆಪಿ ತಿರುಗೇಟು
ದೇಶ ಉಳಿಸುವ ಮುನ್ನ ನಿಮ್ಮ ಸ್ಥಾನ ಉಳಿಸಿಕೊಳ್ಳಿ ಎಂದು ಇತ್ತೀಚಿಗೆ ಕಾಂಗ್ರೆಸ್ ಜೊತೆ ಕೈಜೋಡಿಸಿದ ಆಂಧ್ರ ಪ್ರದೇಶ....
ನವದೆಹಲಿ: ದೇಶ ಉಳಿಸುವ ಮುನ್ನ ನಿಮ್ಮ ಸ್ಥಾನ ಉಳಿಸಿಕೊಳ್ಳಿ ಎಂದು ಇತ್ತೀಚಿಗೆ ಕಾಂಗ್ರೆಸ್ ಜೊತೆ ಕೈಜೋಡಿಸಿದ ಆಂಧ್ರ ಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರಿಗೆ ಬಿಜೆಪಿ ಶನಿವಾರ ತಿರುಗೇಟು ನೀಡಿದೆ.
ದೇಶ ಉಳಿಸಲು ಪ್ರತಿಪಕ್ಷಗಳೊಂದಿಗೆ ಕೈಜೋಡಿಸಿ ಎಂದಿದ್ದ ಆಂಧ್ರ ಸಿಎಂ ಹೇಳಿಕೆಗೆ ಪ್ರತಿಕ್ರಿಯಿಸಿದ ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್ ಅವರು, ಟಿಡಿಪಿ ಮುಖ್ಯಸ್ಥ ಮೊದಲು ತಮ್ಮ ಸ್ಥಾನ ಉಳಿಸಿಕೊಳ್ಳಲಿ. ನಂತರ ದೇಶ ಉಳಿಸುವ ಬಗ್ಗೆ ಚಿಂತಿಸಲಿ ಎಂದಿದ್ದಾರೆ.
ನಾಯ್ಡು ದೇಶ ಉಳಿಸುವ ಬಗ್ಗೆ ಮಾತನಾಡುವುದು ದೊಡ್ಡ ವಿಚಾರ. ಮೊದಲು ಅವರು ಆಂಧ್ರದಲ್ಲಿ ತಮ್ಮ ಸ್ಥಾನ ಉಳಿಸಿಕೊಳ್ಳಲು ಯತ್ನಿಸಲಿ. ಸದ್ಯದ ಆಂಧ್ರ ಪ್ರದೇಶ ಸರ್ಕಾರ ಜನ ವಿರೋಧಿಯಾಗಿದ್ದು, ಭ್ರಷ್ಟಾಚಾರದಲ್ಲಿ ತೊಡಗಿದೆ. 2019ರ ಚುನಾವಣೆಯಲ್ಲಿ ಟಿಡಿಪಿ ಖಂಡಿತ ಅಧಿಕಾರ ಕಳೆದುಕೊಳ್ಳಲಿದೆ ಎಂದು ಮಾಧವ್ ಅವರು ಎಎನ್ಐಗೆ ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡಲಿಲ್ಲ ಎಂಬ ಕಾರಣಕ್ಕೆ ಕಳೆದ ಮಾರ್ಚ್ ನಲ್ಲಿ ಬಿಜೆಪಿ ನೇತೃತ್ವದ ಎನ್ ಡಿಎ ತೊರೆದಿದ್ದ ನಾಯ್ಡು, ಎರಡು ದಿನಗಳ ಹಿಂದಷ್ಟೇ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯನ್ನು ಭೇಟಿ ಮಾಡಿ ಪ್ರತಿಪಕ್ಷಗಳ ಮೈತ್ರಿಕೂಟಕ್ಕೆ ಬೆಂಬಲ ಸೂಚಿಸಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.