ಸಂಗ್ರಹ ಚಿತ್ರ 
ದೇಶ

ಶಬರಿಮಲೆ ಮಲೆ: ವಿಶೇಷ ದರ್ಶನಕ್ಕೆ ಕ್ಷಣಗಣನೆ, ಭದ್ರತೆಗೆ 1500 ಪೊಲೀಸರ ನಿಯೋಜನೆ

ಇದೇ ಸೋಮವಾರದಿಂದ ಅಯ್ಯಪ್ಪಸ್ವಾಮಿ ವಿಶೇಷ ದರ್ಶನ ನಡೆಯುವ ಹಿನ್ನಲೆಯಲ್ಲಿ ಖ್ಯಾತ ಪವಿತ್ರ ಯಾತ್ರಾಸ್ಥಳ ಶಬರಿಮಲೆಯಲ್ಲಿ ವ್ಯಾಪಕ ಭದ್ರತೆ ಒದಗಿಸಲಾಗಿದೆ.

ತಿರುವನಂತಪುರಂ: ಇದೇ ಸೋಮವಾರದಿಂದ ಅಯ್ಯಪ್ಪಸ್ವಾಮಿ ವಿಶೇಷ ದರ್ಶನ ನಡೆಯುವ ಹಿನ್ನಲೆಯಲ್ಲಿ ಖ್ಯಾತ ಪವಿತ್ರ ಯಾತ್ರಾಸ್ಥಳ ಶಬರಿಮಲೆಯಲ್ಲಿ ವ್ಯಾಪಕ ಭದ್ರತೆ ಒದಗಿಸಲಾಗಿದೆ.
ಇದೇ ಸೋಮವಾರದಿಂದ ಶಬರಿಮಲೆಯಲ್ಲಿ ವಿಶೇಷ ದರ್ಶನದ ನಿಮಿತ್ತ ಅಯ್ಯಪ್ಪ ಸ್ವಾಮಿ ದೇಗುಲದ ಬಾಗಿಲು ತೆರೆಯಲಿದ್ದು, ಇದೇ ಕಾರಣಕ್ಕೆ ಶಬರಿಮಲೆಯಲ್ಲಿ ಭದ್ರತೆಗೆ ಬರೊಬ್ಬರಿ 1500 ಪೊಲೀಸರನ್ನು ನಿಯೋಜಿಸಲಾಗುತ್ತಿದೆ.
ಈ ಬಗ್ಗೆ ನಿನ್ನೆ ಪಥನಂತಿಟ್ಟ ಪೊಲೀಸ್ ವರಿಷ್ಠಾಧಿಕಾರಿಗಳ ಸಭೆಯಲ್ಲಿ ಚರ್ಚೆ ನಡೆಸಲಾಗಿದ್ದು.ಪೊಲೀಸ್ ವರಿಷ್ಠಾಧಿಕಾರಿ ಅನಿಲ್ ಕಾಂತ್ ಅವರ ನೇತೃತ್ವದಲ್ಲಿ ಭದ್ರತೆ ನಿಯೋಜಿಸಲಾಗಿದೆ. ಪೊಲೀಸರು ಮಾತ್ರವಲ್ಲದೇ 20 ಸದಸ್ಯರ ಕಮಾಂಡೋ ಪಡೆಯನ್ನೂ ಕೂಡ ನೀಳಕ್ಕಲ್, ಸನ್ನಿಧಾನಂ ಮತ್ತು ಪಂಪೆಯಲ್ಲಿ ನಿಯೋಜಿಸಲಾಗಿದೆ. 
ನವೆಂಬರ್​​ 5ರಂದು ವಿಶೇಷ ಪೂಜೆಗಾಗಿ ಶಬರಿಮಲೆ ಅಯ್ಯಪ್ಪ ದೇವಸ್ಥಾನದ ಬಾಗಿಲು ತೆರೆಯಲಿದ್ದು, ಈ ಮಧ್ಯೆ ಸನ್ನಿಧಾನಂ, ಪಂಪಾ, ನೀಳಕ್ಕಲ್​​ ಹಾಗೂ ಎಲವುಂಕಾಲ್ ನಲ್ಲಿ ನವೆಂಬರ್​​​ 4ರಿಂದ 6ರವರೆಗೆ ಸೆಕ್ಷನ್ 144 ಜಾರಿ ಮಾಡಲು ಪಟ್ಟಣಂತಿಟ್ಟ ಜಿಲ್ಲಾಧಿಕಾರಿ ನಿರ್ಧರಿಸಿದ್ದಾರೆ. ಯಾವುದೇ ಅಹಿತಕರ ಘಟನೆ ನಡೆಯಂತೆ ತಡೆಯಲು ಮುಂಜಾಗ್ರತಾ ಕ್ರಮವಾಗಿ ಹೆಚ್ಚಿನ ಸಂಖ್ಯೆಯ ಪೊಲೀಸರನ್ನ ನಿಯೋಜಿಸಲು ಮುಂದಾಗಿದ್ದಾರೆ.
10 ರಿಂದ 50 ವರ್ಷ ನಡುವಿನ ಮಹಿಳೆಯರು ಕೂಡ ಶಬರಿಮಲೆ ಪ್ರವೇಶಿಸಬಹುದು ಎಂದು ಸುಪ್ರೀಂ ಕೋರ್ಟ್​ ತೀರ್ಪು ನೀಡಿದ ಬಳಿಕ ಕಳೆದ ತಿಂಗಳು ಶಬರಿಮಲೆ ದೇವಾಲಯದ ಬಳಿ ಭಾರೀ ಪ್ರತಿಭಟನೆ ನಡೆದಿತ್ತು. ಈ ವೇಳೆ ಹಿಂಸಾಚಾರ ಪ್ರಕರಣಗಳು ಹಾಗೂ ಅಯ್ಯಪ್ಪ ಭಕ್ತರ ಮೇಲೆ ಲಾಠಿ ಪ್ರಹಾರ ಕೂಡ ನಡೆಸಲಾಗಿತ್ತು. ದೇವಾಲಯ ಪ್ರವೇಶಿಸಲು ಯತ್ನಿಸಿದ ಮಹಿಳೆಯರನ್ನು ಪ್ರತಿಭಟನಾಕಾರರು ತಡೆದು, ವಾಪಸ್​ ಕಳುಹಿಸಿದ್ದರು. ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿ, ಹಲವರು ಗಾಯಗೊಂಡಿದ್ದರು.
ಇದರಿಂದ ಕೇರಳ ಸರ್ಕಾರ ತೀವ್ರ ಮುಜುಗರಕ್ಕೀಡಾಗಿತ್ತು. ಈ ಸಂಬಂಧ ಈವರೆಗೆ 3505 ಮಂದಿಯನ್ನು ಬಂಧಿಸಲಾಗಿದ್ದು, ರಾಜ್ಯಾದ್ಯಂತ ಸುಮಾರು 529 ಕೇಸ್​​ಗಳು ದಾಖಲಾಗಿವೆ. ಶಬರಿಮಲೆಯಲ್ಲಿ ಹಿಂಸಾತ್ಮಕ ಪ್ರತಿಭಟನೆ ನಡೆದ ಹಿನ್ನೆಲೆಯಲ್ಲಿ ಪೊಲೀಸ್​ ಕ್ರಮದ ಬಗ್ಗೆ ವರದಿ ನೀಡಿವಂತೆ ಕೇರಳ ಹೈಕೋರ್ಟ್​ ರಾಜ್ಯ ಸರ್ಕಾರಕ್ಕೆ ಸೂಚಿಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

SCROLL FOR NEXT