ಭಗವಾನ್ ರಾಮನ ವಿಗ್ರಹ ಏಕತೆಯ ಪ್ರತಿಮೆಗಿಂತ ಎತ್ತರವಿರಬೇಕು: ಆಜಂ ಖಾನ್ 
ದೇಶ

ಭಗವಾನ್ ರಾಮನ ವಿಗ್ರಹ ಏಕತೆಯ ಪ್ರತಿಮೆಗಿಂತ ಎತ್ತರವಿರಬೇಕು: ಆಜಂ ಖಾನ್

ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಭಗವಾನ್ ರಾಮನ 151 ಮೀಟರ್ ಎತ್ತರದ ಪ್ರತಿಮೆ ನಿರ್ಮಾಣ ಮಾಡಲು ಸರ್ಕಾರ ಘೋಷಣೆ ಮಾಡುವ ಸಾಧ್ಯತೆ ಇದ್ದು ಸರ್ಕಾರದ ನಡೆಯನ್ನು ಎಸ್ ಪಿ ನಾಯಕ ಆಜಂ ಖಾನ್ ಸ್ವಾಗತಿಸಿದ್ದಾರೆ.

ರಾಮ್ ಪುರ್: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಭಗವಾನ್ ರಾಮನ 151 ಮೀಟರ್ ಎತ್ತರದ ಪ್ರತಿಮೆ ನಿರ್ಮಾಣ ಮಾಡಲು ಸರ್ಕಾರ ಘೋಷಣೆ ಮಾಡುವ ಸಾಧ್ಯತೆ ಇದ್ದು ಸರ್ಕಾರದ ನಡೆಯನ್ನು ಎಸ್ ಪಿ ನಾಯಕ ಆಜಂ ಖಾನ್ ಸ್ವಾಗತಿಸಿದ್ದಾರೆ. 
ಅಯೋಧ್ಯೆಯ ಸರಯೂ ನದಿ ತೀರದಲ್ಲಿ ರಾಮನ ಪ್ರತಿಮೆ ನಿರ್ಮಿಸುವುದನ್ನು ಸ್ವಾಗತಿಸಿರುವ ಆಜಂ ಖಾನ್, ಇತ್ತೀಚೆಗಷ್ಟೇ ಉದ್ಘಾಟನೆಯಾದ 182 ಮೀಟರ್ ಇರುವ ಸರ್ದಾರ್ ಪಟೇಲ್ ಅವರ ಏಕತೆಯ ವಿಗ್ರಹಕ್ಕಿಂತಲೂ ರಾಮನ ವಿಗ್ರಹ ಎತ್ತರವಿರಬೇಕು ಎಂದು ಹೇಳಿದ್ದಾರೆ.  ರಾಮನ ಪ್ರತಿಮೆಯನ್ನು ನಿರ್ಮಿಸುವುದಕ್ಕೆ ಯಾರೂ ವಿರೋಧಿಸುವುದಿಲ್ಲ, ಸರ್ದಾರ್ ಪಟೇಲ್ ಅವರ ಪ್ರತಿಮೆಗಿಂತಲೂ ರಾಮನ ಪ್ರತಿಮೆಯೇ ದೊಡ್ದದಾಗಿರಲಿ ಎಂದು ಆಜಂ ಖಾನ್ ಹೇಳಿದ್ದಾರೆ. 
ದೀಪಾವಳಿ ವೇಳೆಗೆ ಸರಯೂ ನದಿ ತೀರದಲ್ಲಿ ರಾಮನ 151 ಮೀಟರ್ ಎತ್ತರದ ಪ್ರತಿಮೆ ನಿರ್ಮಾಣ ಯೋಜನೆಯನ್ನು ಸಿಎಂ ಯೋಗಿ ಆದಿತ್ಯನಾಥ್ ಘೋಷಿಸುವ ಸಾಧ್ಯತೆ ಇದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

ಉರ್ದು ಭಾಷೆಯಲ್ಲಿ ಸರ್ಕಾರದ ಜಾಹೀರಾತು: ಸಿಎಂ ಸಿದ್ದರಾಮಯ್ಯ ಸಮರ್ಥನೆ ಹೇಗಿದೆ ಗೊತ್ತಾ?

ಬಿಕಿನಿ ಧರಿಸಿರುವ ಮಹಿಳೆಯರ ಜೊತೆಗೆ ಸ್ಟೀಫನ್ ಹಾಕಿಂಗ್! Epstein ಫೈಲ್ಸ್ ನಲ್ಲಿ ಪೋಟೋ ಬಿಡುಗಡೆ

SCROLL FOR NEXT