ದೀಪಕ್ ಕುಲಕರ್ಣಿ 
ದೇಶ

ಪಿಎನ್ಬಿ ವಂಚನೆ ಪ್ರಕರಣ: ಮೆಹುಲ್ ಚೋಕ್ಸಿ ಸಹಾಯಕನ ವಶಕ್ಕೆ ಪಡೆದ ಇಡಿ

ಬಿಲಿಯನ್ ಪಿಎನ್ಬಿ ವಂಚನೆ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿ ವಜ್ರದ ವ್ಯಾಪಾರಿ ಮೆಹುಲ್ ಚೋಕ್ಸಿ ಅವರ ಸಂಸ್ಥೆಯ ಕಾರ್ಯನಿರ್ವಾಹಕ ಅಧಿಕಾರಿಯ....

ಕೋಲ್ಕತ್ತಾ: 2 ಬಿಲಿಯನ್ ಪಿಎನ್ಬಿ ವಂಚನೆ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿ ವಜ್ರದ ವ್ಯಾಪಾರಿ ಮೆಹುಲ್ ಚೋಕ್ಸಿ ಅವರ ಸಂಸ್ಥೆಯ ಕಾರ್ಯನಿರ್ವಾಹಕ ಅಧಿಕಾರಿಯನ್ನು ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ಕೋಲ್ಕತ್ತಾದಲ್ಲಿ ಬಂಧಿಸಿದ್ದಾರೆ.
ಹಾಂಗ್ ಕಾಂಗ್ ನಿಂದ ಆಗಮಿಸಿದ್ದ ದೀಪಕ್ ಕುಲಕರ್ಣಿ ಎನ್ನುವವರನ್ನು ಕೋಲ್ಕತ್ತಾ ವಿಮಾನ ನಿಲ್ದಾಣದಲ್ಲಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ(ಪಿಎಂಎಲ್ಎ) ಅಡಿಯಲ್ಲಿ ಕುಲಕರ್ಣಿ ಅವರ ಬಂಧನವಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಮಂಗಳವಾರ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವ ನಿರೀಕ್ಷೆ ಇದ್ದು ಈ ವೇಳೆ ಪ್ರಕರಣ ದಾಖಲಾಗಿರುವ ಮುಂಬೈಗೆ ಈತನ ಸ್ಥಳಾಂತರಕ್ಕೆ ಅಧಿಕಾರಿಗಳು ನ್ಯಾಯಾಲಯವನ್ನು ಕೋರಲಿದ್ದಾರೆ ಎಂದು ತಿಳಿದು ಬಂದಿದೆ.
ಕುಲಕರ್ಣಿ  ಪ್ರಕರಣದ ಮುಖ್ಯ ಆರೋಪಿಯಾದ ಚೋಕ್ಸಿಯ ಸಾಗರೋತ್ತರ ವ್ಯವಹಾರಗಳ ಜತೆ ಸಂಬಂಧ ಹೊಂದಿದ್ದರು.ಇಡಿ ಅವರ ವಿರುದ್ಧ ಲುಕ್ ಔಟ್ ಸರ್ಕ್ಯುಲರ್ ಹೊರಡಿಸಿತ್ತು ಎಂದು ಅಧಿಕಾರಿಗಳು ಹೇಳಿದರು, ಚೋಕ್ಸಿಗೆ ಸಂಬಂಧಿಸಿರುವ ಹಾಂಗ್ ಕಾಂಗ್ ನಲ್ಲಿದ್ದ "ಡಮ್ಮಿ" ಸಂಸ್ಥೆಯೊಂದರಲ್ಲಿ ಅವರು ನಿರ್ದೇಶಕರಾಗಿದ್ದರು ಎಂದು ಅಧಿಕೃತ ಮೂಲಗಳು ಮಾಹಿತಿ ನೀಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

SIR ವೇಳೆ ಡಿಲೀಟ್ ಆಗಿರುವ 13.3 ಕೋಟಿ ಮತದಾರರ ಪತ್ತೆಗೆ ಕಾಂಗ್ರೆಸ್‌ನಿಂದ ‘ಮತ ರಕ್ಷಕ’ರ ನೇಮಕ!

'ಇತಿಹಾಸ ನಿಮ್ಮನ್ನು ಇನ್ನಷ್ಟು ಗೌರವದಿಂದ ನೆನಪಿಸಿಕೊಳ್ಳಲಿದೆ'; Agarkarಗೆ ಗೇಟ್ ಪಾಸ್`, ಗಂಭೀರ್‌ ಭಾವುಕ ಸಂದೇಶ!

Bigg Boss Kannada: ಟಾಸ್ಕ್ ವೇಳೆ ಕುಸಿದು ಬಿದ್ದ ನಟಿ ಸಂಗೀತಾ ಭಟ್; ಆರೋಗ್ಯದಲ್ಲಿ ಏರುಪೇರು! ವಿಡಿಯೋ ವೈರಲ್

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video