ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಭೀಕರ ಹತ್ಯೆ: ಅಪ್ರಾಪ್ತ ಬಾಲಕಿ ಮೇಲೆ ಗ್ಯಾಂಗ್‍ರೇಪ್? ಅರೇ ನಗ್ನ ಮೃತದೇಹದ ಮೇಲೆ 37 ಕಡೆ ಚೂರಿ ಇರಿತ!

ಅಪ್ರಾಪ್ತ ಬಾಲಕಿ ಮೃತದೇಹ ಪತ್ತೆಯಾಗಿದ್ದು ದೇಹದ ಮೇಲೆ 37 ಕಡೆ ಭೀಕರವಾಗಿ ಚೂರಿ ಇರಿತ ಕಂಡು ಬಂದಿದ್ದು ಸಾಮೂಹಿಕ ಅತ್ಯಾಚಾರದ ಬಳಿಕ...

ಸಂಗ್ರಹ ಚಿತ್ರ
Vishwanath S
Updated On : 7 Nov 2018, 9:20 am
ರಾಜ್ಕೋಟ್: ಅಪ್ರಾಪ್ತ ಬಾಲಕಿ ಮೃತದೇಹ ಪತ್ತೆಯಾಗಿದ್ದು ದೇಹದ ಮೇಲೆ 37 ಕಡೆ ಭೀಕರವಾಗಿ ಚೂರಿ ಇರಿತ ಕಂಡು ಬಂದಿದ್ದು ಸಾಮೂಹಿಕ ಅತ್ಯಾಚಾರದ ಬಳಿಕ ಕಾಮಾಂಧರು ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ. 
ಗುಜರಾತ್ ನ ಗಿರ್-ಸೋಮನಾಥ್ ಜಿಲ್ಲೆಯಲ್ಲಿ 16 ವರ್ಷದ ಬಾಲಕಿಯ ಮೃತದೇಹ ಪತ್ತೆಯಾಗಿತ್ತು. ದೇಹದ ಮೇಲೆ 37 ಕಡೆ ಚೂರಿ ಇರಿತ ಕಂಡುಬಂದಿದ್ದು ಕಾಮುಕರು ಸಾಮೂಹಿಕ ಅತ್ಯಾಚಾರ ನಡೆಸಿ ಚೂರಿ ಇರಿದು ಹತ್ಯೆ ಮಾಡಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ. 
ಕೊಡಿನಾರ್ ನ ಕಾರ್ಪೋರೇಟರ್ ನಡೆಸುವ ಶಾಲೆಯೊಂದರಲ್ಲಿ ಬಾಲಕಿ 11ನೇ ತರಗತಿಯಲ್ಲಿ ಓದುತ್ತಿದ್ದಳು. ಬಾಲಕಿಯ ಸ್ನೇಹಿತರೇ ಈ ದುಷ್ಕೃತ್ಯ ಎಸಗಿದ್ದಾರೆ ಎಂದು ಪೊಲೀಸರು ಶಂಕಿಸಿದ್ದು ಈ ಸಂಬಂಧ ಇಬ್ಬರು ಇಬ್ಬರು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. 

Advertisement

Advertisement

ಪೊಲೀಸರು ಬಾಲಕಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು ವರದಿ ಬಂದ ನಂತರ ಬಾಲಕಿ ಮೇಲೆ ಅತ್ಯಾಚಾರ ನಡೆದಿದೆ ಎಂಬ ಸ್ಪಷ್ಟನೆ ಸಿಗಲಿದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments