ಉತ್ತರಾಖಂಡ್ ತಲುಪಿದ ಪ್ರಧಾನಿ: ಕೇದಾರನಾಥ್ ನಿಗೆ ಪೂಜೆ
ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೆಲಿಕಾಪ್ಟರ್ ನಲ್ಲಿ ಡೆಹ್ರಾಡೂನ್ ಗೆ ಬಂದಿಳಿದಿದ್ದು, ಕೇದಾರನಾಥ್ ನಿಗೆ ಪೂಜೆ ಸಲ್ಲಿಸಲಿದ್ದಾರೆ ಎಂದು ಅಧಿಕಾರಿಗಳು..
ಡೆಹ್ರಾಡೂನ್: ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೆಲಿಕಾಪ್ಟರ್ ನಲ್ಲಿ ಡೆಹ್ರಾಡೂನ್ ಗೆ ಬಂದಿಳಿದಿದ್ದು, ಕೇದಾರನಾಥ್ ನಿಗೆ ಪೂಜೆ ಸಲ್ಲಿಸಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದೆಹಲಿಯಿಂದ ಇಂಡಿಯನ್ ಏರ್ ಫೋರ್ಸ್ ನ ವಿಶೇಷ ವಿಮಾನದಲ್ಲಿ ಆಗಮಿಸಿದ್ದಾರೆ, ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ತ್ರಿವೇಂದ್ರ ರಾವತ್ ಅವರು ಸ್ವಾಗತಿಸಿದರು.
ಕೇದಾರನಾಥನಿಗೆ ವಿಶೇಷ ಪೂಜೆ ಸಲ್ಲಿಸಲಿದ್ದು, 2013 ರಲ್ಲಿ ಉಂಟಾದ ಭಾರೀ ಪ್ರವಾಹ ಸಂಭವಿಸಿ ಸಾವಿರಾರು ಮಂದಿ ಸಾವನ್ನಪ್ಪಿದ್ದರು. ಇದರ ಪುನರ್ ನಿರ್ಮಾಣ ಕಾರ್ಯ ನಡೆಯುತ್ತಿದ್ದು, ಅದರ ಪರಿಶೀಲನೆ ನಡೆಸಲಿದ್ದಾರೆ.
ಕೇದಾರನಾಥ್ ನಲ್ಲಿ ನಡೆಯುತ್ತಿರುವ ಪುನರ್ ನಿರ್ಮಾಣ ಕೆಲಸಕ್ಕೆ ಪ್ರಧಾನಿ ಮೋದಿ ವಯಕ್ತಿಕವಾಗಿ ಆಸಕ್ತಿ ತೋರಿದ್ದಾರೆ.ಕಳೆದ ಆರು ತಿಂಗಳಿಂದ ಎರಡು ಬಾರಿ ಇಲ್ಲಿಗೆ ಭೇಟಿ ನೀಡಿದ್ದಾರೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.