ನವದೆಹಲಿ: ಬಿಜೆಪಿಯ ಉಕ್ಕಿನ ಮನುಷ್ಯ ಅಡ್ವಾಣಿ ಅವರಿಗೆ ಇಂದು 91 ನೇ ಜನ್ಮದಿನ. ಈ ಸಂದರ್ಭದಲ್ಲಿ ತಮ್ಮ ರಾಜಕೀಯ ಗುರುವೂ ಆಗಿರುವ ಪಕ್ಷದ ಹಿರಿಯ ನಾಯಕ ಅಡ್ವಾಣಿಗೆ ಪ್ರಧಾನಿ ಮೋದಿ ಶುಭಶಯ ಕೋರಿದ್ದಾರೆ.
ಟ್ವಿಟರ್ ನಲ್ಲಿ ಶುಭಾಶಯ ಸಂದೇಶ ಹಂಚಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅಡ್ವಾಣಿ ಅವರು ನಿಸ್ವಾರ್ಥ ಸೇವೆ ಸಲ್ಲಿಸಿರುವ ಶ್ರದ್ಧಾವಂತ ನಾಯಕ ಎಂದು ಬಣ್ಣಿಸಿದ್ದಾರೆ. ದೇಶದ ರಾಜಕಾರಣದಲ್ಲಿ ಅಡ್ವಾಣಿ ಅವರ ಪ್ರಭಾವ ಸಾಕಷ್ಟಿದೆ ಎಂದು ಮೋದಿ ಹೇಳಿದ್ದಾರೆ. ಭಾರತದ ಅಭಿವೃದ್ಧಿಗೆ ಅಡ್ವಾಣಿ ಅವರ ಕೊಡುಗೆ ಸ್ಮರಣಿಯವಾದದ್ದು, ಅಡ್ವಾಣಿ ಅವರ ಉತ್ತಮ ಆರೋಗ್ಯಕ್ಕಾಗಿ ಪ್ರಾರ್ಥಿಸುತ್ತೇನೆ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.