ಹೈದರಾಬಾದ್: ಕೇಂದ್ರದ ಆಡಳಿತರೂಢ ಬಿಜೆಪಿ ವಿರುದ್ಧ ಪ್ರತಿಪಕ್ಷಗಳನ್ನು ಒಗ್ಗೂಡಿಸುವ ಪ್ರಯತ್ನವನ್ನು ಮುಂದುವರೆಸಿರುವ ಆಂಧ್ರ ಪ್ರದೇಶ ಮುಖ್ಯಮಂತ್ರಿ, ಟಿಡಿಪಿ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಅವರು ನವೆಂಬರ್ 22ರಂದು ಬಿಜೆಪಿಯೇತರ ಪಕ್ಷಗಳ ಸಭೆ ಕರೆದಿದ್ದಾರೆ.
ಆಂಧ್ರ ಸಿಎಂ ಕರೆದಿರುವ ಬಿಜೆಪಿಯೇತರ ಪಕ್ಷಗಳ ಸಭೆ ನವೆಂಬರ್ 22ರಂದು ದೆಹಲಿಯಲ್ಲಿರುವ ಆಂಧ್ರಪ್ರದೇಶ ಭವನದಲ್ಲಿ ನಡೆಯುವ ಸಾಧ್ಯತೆ ಇದೆ.
ಚಂದ್ರಬಾಬು ನಾಯ್ಡು ಅವರು ಇತ್ತೀಚಿಗೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸೇರಿದಂತೆ ದೆಹಲಿಯಲ್ಲಿ ಹಲವು ಪ್ರತಿಪಕ್ಷಗಳ ಮುಖಂಡರನ್ನು ಭೇಟಿ ಮಾಡಿದ ಬೆನ್ನಲ್ಲೇ ಈ ಸಭೆ ಕರೆದಿದ್ದಾರೆ.
ಚಂದ್ರಬಾಬು ನಾಯ್ಡು ಅವರು ಇಂದು ಬೆಳಗ್ಗೆ ಸಹ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಶೋಕ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದರು.