ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ 
ದೇಶ

ಛತ್ತೀಸ್ಗಢದಲ್ಲಿ ಬಿಜೆಪಿ ಸರ್ಕಾರ ನಕ್ಸಲರನ್ನು ಸಂಪೂರ್ಣವಾಗಿ ಮಟ್ಟ ಹಾಕಿದೆ: ಅಮಿತ್ ಶಾ

ಛತ್ತೀಸ್ಗಢದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರ ನಕ್ಸಲರನ್ನು ಹಾಗೂ ಅವರ ಚಟುವಟಿಕೆಗಳನ್ನು ಸಂಪೂರ್ಣವಾಗಿ ಮಟ್ಟ ಹಾಕಿದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಶನಿವಾರ ಹೇಳಿದ್ದಾರೆ...

ರಾಯ್ಪುರ: ಛತ್ತೀಸ್ಗಢದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರ ನಕ್ಸಲರನ್ನು ಹಾಗೂ ಅವರ ಚಟುವಟಿಕೆಗಳನ್ನು ಸಂಪೂರ್ಣವಾಗಿ ಮಟ್ಟ ಹಾಕಿದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಶನಿವಾರ ಹೇಳಿದ್ದಾರೆ. 
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿರುವ ಅವರು, ಮುಖ್ಯಮಂತ್ರಿ ರಮಣ್ ಸಿಂಗ್ ನೇತೃತ್ವದ ಬಿಜೆಪಿ ಸರ್ಕಾರ ರಾಜ್ಯ ನಕ್ಸಲ್ ಮುಕ್ತ ರಾಜ್ಯವಾಗುವಂತೆ ಮಾಡಿದೆ. ರಾಜ್ಯದಲ್ಲಿ ನಕ್ಸಲರ ಚಟುವಟಿಕೆಗಳನ್ನು ಸಂಪೂರ್ಣವಾಗಿ ಮಟ್ಟಹಾಕಲಾಗಿದೆ ಎಂದು ಹೇಳಿದ್ದಾರೆ. 
ರಾಜ್ಯದ ಅಭಿವೃದ್ಧಿಗಾಗಿ ಸಾಕಷ್ಟು ಪರಿಶ್ರಮ ಪಡಲಾಗುತ್ತಿದೆ. ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವ ವಿಶ್ವಾಸ ನಮಗಿದೆ. ಕೌಶಲ್ಯ ಅಭಿವೃದ್ಧಿಗೆ ಶಾಸನವನ್ನು ಹೊಂದಿರುವ ಮೊದಲ ರಾಜ್ಯ ಛತ್ತೀಸ್ಗಢವಾಗಿದೆ. ರಾಜ್ಯದ ಅಭಿವೃದ್ಧಿಗಾಗಿ ಸರ್ಕಾರ ಸಾಕಷ್ಟು ಕಲ್ಯಾಣ ಯೋಜನೆಗಳನ್ನು ಕೈಗೊಂಡಿದೆ. ಮನ್ರೇಗಾ ಯೋಜನೆಯನ್ನು ಭ್ರಷ್ಟಾಚಾರ ಮುಕ್ತಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods|ಮೃತರ ಸಂಖ್ಯೆ 165ಕ್ಕೆ ಏರಿಕೆ; ನಾಪತ್ತೆಯಾದವರಲ್ಲಿ 133 ಮಂದಿ ಭಾರತೀಯರು

Iran ಸರ್ವೋಚ್ಚ ನಾಯಕ Mojtaba Khamenei ಸತ್ತಿಲ್ಲ, ಗಂಭೀರವಾಗಿ ಗಾಯಗೊಂಡಿದ್ದಾರೆ: ಹಳೇ Vidoe ಬಿಡುಗಡೆ ಬೆನ್ನಲ್ಲೇ ಅಸಲಿಯತ್ತು ಬಿಚ್ಚಿಟ್ಟ Donald Trump..!

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ