ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್
ಭೋಪಾಲ್: ಚುನಾವಣೆ ಬಂದಾಗ ಪ್ರಣಾಳಿಕೆ ಬಿಡುಗಡೆ ಮಾಡುವ ಕಾಂಗ್ರೆಸ್, ಎಂದಿಗೂ ತಾನು ನೀಡಿದ ಭರವಸೆಗಳನ್ನು ಈಡೇರಿಸಿಲ್ಲ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಶನಿವಾರ ಹೇಳಿದ್ದಾರೆ.
ಮಧ್ಯಪ್ರದೇಶ ವಿಧಾನಶಬೆ ಚುನಾವಣೆ ಹಿನ್ನಲೆಯಲ್ಲಿ ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ಈ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಚೌಹಾಣ್ ಅವರು, ಚುನಾವಣೆ ಬಂದಾಗ ಪ್ರಣಾಳಿಕೆ ಬಿಡುಗಡೆ ಮಾಡುವ ಕಾಂಗ್ರೆಸ್, ಎಂದಿಗೂ ತಾನು ನೀಡಿದ ಭರವಸೆಗಳನ್ನು ಈಡೇರಿಸಿಲ್ಲ ಎಂದು ಹೇಳಿದ್ದಾರೆ.
ದೇಶದಿಂದ ಬಡತನ ತೊಲಗುವಂತೆ ಮಾಡುತ್ತೇವೆಂದು ಇಂದಿರಾ ಗಾಂಧಿ ಹಾಗೂ ರಾಜೀವ್ ಗಾಂಧಿಯವರು ಭರವಸೆ ನೀಡಿದ್ದರು. ಆದರೆ, ಅದನ್ನು ಮಾಡಲಿಲ್ಲ. ಕಾಂಗ್ರೆಸ್ ಹಿರಿಯ ನಾಯಕರು ನೀಡಿದ್ದ ಭರವಸೆಗಳನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಶಿವರಾಜ್ ಸಿಂಗ್ ಚೌಹಾಣ್ ಪೂರ್ಣಗೊಳಿಸುತ್ತಿದ್ದಾರೆ.
ಕಾಂಗ್ರೆಸ್ ಇಂದು ತನ್ನ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಅವರು ಕೇವಲ ಪ್ರಣಾಳಿಕೆಯನ್ನಷ್ಟೇ ಬಿಡುಗಡೆ ಮಾಡುತ್ತಾರೆ, ಇಂದಿರಾ ಹಾಗೂ ರಾಜೀವ್ ಅವರು ಕೂಡ ಇದನ್ನೇ ಮಾಡಿದ್ದರು. ಆದರೆ, ಆ ಭರವಸೆಗಳನ್ನು ಅವರು ಈಡೇರಿಸಲಿಲ್ಲ, ಕಾಂಗ್ರೆಸ್ ನಾಯಕರು ನೀಡಿದ್ದ ಭರವಸೆಗಳನ್ನು ಬಿಜೆಪಿ ಪೂರ್ಣಗೊಳಿಸಿದ್ದಕಂಕೆ ಕಾಂಗ್ರೆಸ್ ಕೆಂಡಾಮಂಡಲಗೊಂಡಿದೆ ಎಂದು ತಿಳಿಸಿದ್ದಾರೆ.