ಕೇರಳ ಸಿಎಂ ಪಿಣರಾಯಿ ವಿಜಯನ್ 
ದೇಶ

ಶಬರಿಮಲೆ ವಿಚಾರದಲ್ಲಿ ಹಿಂದೆ ಸರಿಯುವುದಿಲ್ಲ: ಕೇರಳ ಸಿಎಂ

ಶಬರಿಮಲೆ ಅಯ್ಯಪ್ಪ ದೇಗುಲಕ್ಕೆ ಮಹಿಳೆಯರ ಪ್ರವೇಶ ಕುರಿತ ವಿಚಾರದಿಂದ ರಾಜ್ಯ ಸರ್ಕಾರ ಹಿಂದಕ್ಕೆ ಸರಿಯುವುದಿಲ್ಲ ಎಂದು ಕೇರಳ ರಾಜ್ಯ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಶನಿವಾರ ಹೇಳಿದ್ದಾರೆ...

ತಿರುವನಂತಪುರ: ಶಬರಿಮಲೆ ಅಯ್ಯಪ್ಪ ದೇಗುಲಕ್ಕೆ ಮಹಿಳೆಯರ ಪ್ರವೇಶ ಕುರಿತ ವಿಚಾರದಿಂದ ರಾಜ್ಯ ಸರ್ಕಾರ ಹಿಂದಕ್ಕೆ ಸರಿಯುವುದಿಲ್ಲ ಎಂದು ಕೇರಳ ರಾಜ್ಯ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಶನಿವಾರ ಹೇಳಿದ್ದಾರೆ. 
ಮಾಧ್ಯಮಗಳೊಂದಿನ ಸಂವಾದದಲ್ಲಿ ಮಾತನಾಡಿದ ಅವರು, ಸಂಪ್ರದಾಯಗಳು ಬದಲಾದಾಗ ವಿರೋಧಗಳು ವ್ಯಕ್ತವಾಗುವುದು ಸಾಮಾನ್ಯ. ಆದರೆ, ಶಬರಿಮನೆ ವಿಚಾರದಲ್ಲಿ ಸರ್ಕಾರದ ಹಿಂದಕ್ಕೆ ಸರಿಯುವುದಿಲ್ಲ. ದೇವಾಲಯಕ್ಕೆ ಬರುವ ಮಹಿಳೆಯರಿಗೆ ಶೌಚಾಲಯ, ಸ್ನಾನ ವ್ಯವಸ್ಥೆಗಳು ಸೇರಿ ಇತರೆ ವ್ಯವಸ್ಥೆಗಳನ್ನು ನೀಡಲಾಗುತ್ತದೆ. ಪ್ರಸ್ತುತ ಎದ್ದಿರುವ ಬಿಕ್ಕಟ್ಟು ತಾತ್ಕಾಲಿಕವಷ್ಟೇ. ಶಬರಿಮನೆ ಅಭಿವೃದ್ಧಿಗಾಗಿ ಸರ್ಕಾರ ಮಾಸ್ಟರ್ ಪ್ಲಾನ್ ರಚಿಸಲಾಗುತ್ತಿದೆ ಎಂದು ಹೇಳಿದ್ದಾರೆ. 
ಇದೇ ವೇಳೆ ಶಬರಿಮಲೆ ದೇಗುಲಕ್ಕೆ ಬರುತ್ತಿರುವ ಆದಾಯವನ್ನು ದುರ್ಬಳಕೆ ಮಾಡಿಕೊಳ್ಳಲು ಸರ್ಕಾರ ಯತ್ನಿಸುತ್ತಿದೆ ಎಂಬ ಆರೋಪಗಳನ್ನು ಪಿಣರಾಯಿ ಅವರು ಖಂಡಿಸಿದ್ದಾರೆ. 
ದೇಗುಲದಲ್ಲಿ ಮೂಲಸೌಕರ್ಯಗಳನ್ನು ಅಭಿವೃದ್ಧಿ ಪಡಿಸಲು ಹಾಗೂ ರಸ್ತೆ ಅಭಿವೃದ್ಧಿ ಪಡಿಸಲು ಸರ್ಕಾರ ಸಾಕಷ್ಟು ಹಣವನ್ನು ವ್ಯಯಿಸುತ್ತಿದೆ. ಆದರೆ, ಕೆಲವರು ಸರ್ಕಾರ ದೇಗುಲದ ಹಣವನ್ನು ಬಳಕೆ ಮಾಡಿಕೊಳ್ಳುತ್ತಿದೆ ಎಂದು ಜನರಿಗೆ ತಪ್ಪು ಸಂದೇಶಗಳನ್ನು ರವಾನಿಸುತ್ತಿದ್ದಾರೆ. ಶಬರಿಮಲೆಯಲ್ಲಿ ಸಮಸ್ಯೆಗಳನ್ನು ಹುಟ್ಟುಹಾಕುತ್ತಿರುವವರ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!

ಚು.ಆಯೋಗದ ವಿರುದ್ಧ INDIA ಪ್ರತಿಭಟನೆ; 'ಕೈ' ನಾಯಕರು ಪೊಲೀಸ್ ವಶಕ್ಕೆ: ವ್ಯಾನ್ ನಿಂದ ಇಳಿದು ರಾಹುಲ್ ಜೊತೆ ಮರದ ಕೆಳಗೆ ಕುಳಿತ ಪ್ರಿಯಾಂಕ!

ಹಬ್ಬಗಳ ಹೊತ್ತಲ್ಲೆ ಕಾಂಗ್ರೆಸ್‌ನಿಂದ ಜನತೆಗೆ ಮತ್ತೊಂದು ಶಾಕ್: Nandini ಹಾಲಿನ ದರ ಲೀಟರ್‌ಗೆ 8 ರೂ. ಏರಿಕೆಗೆ ಸಂಪುಟ ಸಮ್ಮತಿ!

ನೈಸ್ ಯೋಜನೆ ನನ್ನ ಕೂಸಾದರೆ, ಸೂಲಗಿತ್ತಿ ಯಾರು? ನನ್ನ ಕಿಡ್ನಿಗೆ ಸಮಸ್ಯೆ ಇರಬಹುದು, ಬ್ರೇನ್‌ಗೆ ಅಲ್ಲ: ಕಾಂಗ್ರೆಸ್ ವಿರುದ್ಧ ಗುಡುಗಿದ ದೇವೇಗೌಡ

'ನಾವು ಒಂದೂವರೆ ವರ್ಷ ಪ್ರೀತಿಸುತ್ತಿದ್ದೆವು': ಲಂಡನ್ ಲವ್​ ಕಹಾನಿ ನೆನೆದು ಭಾವುಕರಾದ CM ವಿಜಯ್​ ಪುತ್ರ ಜೇಸನ್!