ನರೇಂದ್ರ ಮೋದಿ-ಕಪಿಲ್ ಮಿಶ್ರಾ-ಅರವಿಂದ್ ಕೇಜ್ರಿವಾಲ್ 
ದೇಶ

ಪ್ರಧಾನಿ ಮೋದಿ ಬೆಂಬಲಿಸಿ ಎಎಪಿ ಮಾಜಿ ಸಚಿವ ಕಪಿಲ್ ಮಿಶ್ರಾರಿಂದ ಹೊಸ ಅಭಿಯಾನ!

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಸದಾ ಪ್ರಧಾನಿ ನರೇಂದ್ರ ಮೋದಿಯನ್ನು ಟೀಕಿಸುತ್ತಿದ್ದರೆ ಇತ್ತ ಆಮ್ ಆದ್ಮಿ ಪಾರ್ಟಿ(ಎಎಪಿ) ಶಾಸಕ ಹಾಗೂ ಮಾಜಿ...

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಸದಾ ಪ್ರಧಾನಿ ನರೇಂದ್ರ ಮೋದಿಯನ್ನು ಟೀಕಿಸುತ್ತಿದ್ದರೆ ಇತ್ತ ಆಮ್ ಆದ್ಮಿ ಪಾರ್ಟಿ(ಎಎಪಿ) ಶಾಸಕ ಹಾಗೂ ಮಾಜಿ ಸಚಿವ ಕಪಿಲ್ ಮಿಶ್ರಾ ಅವರು ಪ್ರಧಾನಿ ನರೇಂದ್ರ ಮೋದಿಯನ್ನು ಬೆಂಬಲಿಸಿ ಹೊಸ ಅಭಿಯಾನವನ್ನು ಶುರು ಮಾಡುತ್ತಿರುವುದು ರಾಜಕೀಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. 
ಕಪಿಲ್ ಮಿಶ್ರಾ ಅವರು ನನ್ನ ಪ್ರಧಾನಿ ನನ್ನ ಹೆಮ್ಮೆ ಎಂಬ ಅಭಿಯಾನವನ್ನು ಇಂದು ಮಧ್ಯಾಹ್ನ 3 ಗಂಟೆಗೆ ಅಧಿಕೃತವಾಗಿ ಪ್ರಾರಂಭಿಸುವುದಾಗಿ ವಿಡಿಯೋ ಮೂಲಕ ತಿಳಿಸಿರುವ ಕಪಿಲ್ ಮಿಶ್ರಾ ತಮ್ಮ ಅಭಿಯಾನಕ್ಕೆ ದೇಶದ ಜನತೆ ಸಹಕಾರ ನೀಡಬೇಕೆಂದು ಕೋರಿದ್ದಾರೆ. 
ನವದೆಹಲಿಯ ಇಂಡಿಯಾ ಗೇಟ್ ಬಳಿ ಅಭಿಯಾನ ಪ್ರಾರಂಭಿಸುವುದಾಗಿ ತಿಳಿಸಿದ ಶಾಸಕ ಕಪಿಲ್ ಮಿಶ್ರಾ, ಇದರಲ್ಲಿ ಜನತೆ ಭಾಗಿಯಾಗಬೇಕೆಂದು ಕೇಳಿಕೊಂಡಿದ್ದಾರೆ. ತಮ್ಮ ಟ್ವೀಟರ್ ನಲ್ಲಿ ವಿಡಿಯೋ ಮೂಲಕ ಕಪಿಲ್ ಮಿಶ್ರಾ ಹಾಕಿಕೊಂಡಿದ್ದಾರೆ. ಈ ಟ್ವೀಟ್ ಅನ್ನು ಸಾವಿರಾರು ಮಂದಿ ಲೈಕ್ ಹಾಗೂ ರೀಟ್ವೀಟ್ ಮಾಡಿದ್ದಾರೆ. ಈ ಅಭಿಯಾನವನ್ನು ಬೆಂಬಲಿಸುವುದಾಗಿ ಹಲವು ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'24 ಗಂಟೆಯೊಳಗೆ ಬಂಧಿತರ ಬಿಡುಗಡೆ ಮಾಡದಿದ್ದರೆ ನಾನೂ ಪ್ರತಿಭಟನೆ ಮಾಡುತ್ತೇನೆ': ಸೋನಮ್ ವಾಂಗ್‌ಚುಕ್ ಎಚ್ಚರಿಕೆ

ವೀರಶೈವ-ಲಿಂಗಾಯತ ಬೇರೆ ಮಾಡಲು ಹೋದಾಗ ಮಠಾಧೀಶರ ಕ್ಷಮೆ ಕೇಳಿದ್ದೆ: ನಾವು ಸೂಜಿಯಂತೆ ಹೊಲಿಯುವವರೇ ಹೊರತು ಕತ್ತರಿಯಲ್ಲ ಎಂದ ಸಿಎಂ ಡಿಕೆಶಿ

ಡಿಕೆಶಿನೇ ಹೇಳಿದ್ದಾರೆ ನಿನ್ನ ಕ್ಷೇತ್ರಕ್ಕೆ ನಾನೇ ಬಾಸ್ ಅಂತ: ನನ್ನ ಕ್ಷೇತ್ರಕ್ಕೆ ಕೈ ಹಾಕಿದ್ರೆ ಬಿಡಲ್ಲ; MC Sudhakarಗೆ ಪ್ರದೀಪ್ ಪರೋಕ್ಷ ಟಾಂಗ್‌

'SIR ನಿಲ್ಲಲ್ಲ, ಜ್ಞಾನೇಶ್ ಕುಮಾರ್ ಕೂಡ ಹೋಗಲ್ಲ’; ಪ್ರಶ್ನೆ ಏನು ಅಂದ್ರೆ ಪ್ರತಿಭಟನೆಗಳ ಗತಿ ಏನು?: ಪತ್ರಕರ್ತ ಭೂಪೇಂದ್ರ ಚೌಬೆ

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!