ಸಾಂದರ್ಭಿಕ ಚಿತ್ರ 
ದೇಶ

ಅಪರಾಧ ದಾಖಲೆ ಸಲ್ಲಿಸದ ಅಭ್ಯರ್ಥಿಗಳ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮ - ಚುನಾವಣಾ ಆಯೋಗ

ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳು ತಮ್ಮ ಅಪರಾಧ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಜಾಹೀರಾತು ನೀಡದಿದ್ದಲ್ಲಿ ನ್ಯಾಯಾಂಗ ನಿಂದನೆ ಕ್ರಮ ಎದುರಿಸಬೇಕಾಗುತ್ತದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ನವದೆಹಲಿ:ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳು ತಮ್ಮ ಅಪರಾಧ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಜಾಹೀರಾತು ನೀಡದಿದ್ದಲ್ಲಿ  ನ್ಯಾಯಾಂಗ ನಿಂದನೆ ಕ್ರಮ ಎದುರಿಸಬೇಕಾಗುತ್ತದೆ.ಅಪರಾಧ ಪ್ರಕರಣಗಳಿಗೆ ಸಂಬಂಧಿಸಿದಂತೆ ತಪ್ಪು ಮಾಹಿತಿ ನೀಡುವವರು  ಭಾರೀ ದಂಡ ನೀಡಬೇಕಾಗುತ್ತದೆ ಎಂದು ಚುನಾವಣಾ ಆಯೋಗ ಹೇಳಿದೆ.

ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳು ತಮ್ಮ ಅಪರಾಧ  ಚಟವಟಿಕೆಗಳ ಬಗ್ಗೆ ಸುದ್ದಿ ವಾಹಿನಿ ಮತ್ತು ಪತ್ರಿಕೆಗಳಲ್ಲಿ ಮೂರು ಬಾರಿ ಜಾಹೀರಾತು ನೀಡುವುದನ್ನು  ಅಕ್ಟೋಬರ್ 10 ರಂದು ಸುಪ್ರೀಂಕೋರ್ಟ್  ಚುನಾವಣಾ ಮಂಡಳಿಗೆ ನಿರ್ದೇಶನ ನೀಡಿದೆ.

ಮಧ್ಯಪ್ರದೇಶ, ರಾಜಸ್ತಾನ, ಛತ್ತೀಸ್ ಗಢ, ಮಿಜೋರಾಂ ಹಾಗೂ ತೆಲಂಗಾಣ ರಾಜ್ಯಗಳ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ಈ ರೀತಿಯಲ್ಲಿ ನಿರ್ದೇಶನ ನೀಡಿತ್ತು.

ರಾಜಕೀಯ ಪಕ್ಷಗಳೂ ಕೂಡಾ ತಮ್ಮ ಅಭ್ಯರ್ಥಿಗಳ ಅಪರಾಧ ದಾಖಲೆಯನ್ನು ಪ್ರಕಟಿಸುವಂತೆ  ನ್ಯಾಯಾಲಯ ನಿರ್ದೇಶನ ನೀಡಿದೆ. ಯಾವುದೇ ಅಪರಾಧ ಪ್ರಕರಣ ಹೊಂದಿಲ್ಲದವರು ಅಥವಾ ದಾಖಲೆ ಹೊಂದಿಲ್ಲದವರು ಜಾಹೀರಾತು ಹೊರಡಿಸಬೇಕಾದ ಅಗತ್ಯವಿಲ್ಲ ಎಂದು ಚುನಾವಣಾ ಆಯೋಗ ತಿಳಿಸಿದೆ.

ಸೂಕ್ತ ರೀತಿಯಲ್ಲಿ ಜಾಹೀರಾತು ಪ್ರಕಟಿಸದ ಅಭ್ಯರ್ಥಿಗಳು ಅಥವಾ ರಾಜಕೀಯ ಪಕ್ಷಗಳ ವಿರುದ್ಧ  ಚುನಾವಣಾ ನಂತರ ಸುಪ್ರೀಂಕೋರ್ಟ್  ತೀರ್ಪು ಉಲ್ಲಂಘನೆಯ ಕ್ರಮ ಜರುಗಿಸಲಾಗುವುದು, ತಪ್ಪು ಮಾಹಿತಿ ನೀಡುವವರ ವಿರುದ್ಧ ಭಾರೀ ದಂಡ ವಿಧಿಸಲಾಗುತ್ತದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಬಲಿತ ದಲಿತ'ನೇ, ನಿಮಗೆ, ನಿಮ್ಮಪ್ಪನಿಗೆ ಇನ್ನೆಷ್ಟು ವರ್ಷ ಮೀಸಲು ಕ್ಷೇತ್ರಗಳು ಬೇಕು?: ಖರ್ಗೆ ವಿರುದ್ಧ ಕುಮಾರಸ್ವಾಮಿ ಕೆಂಡಾಮಂಡಲ

ಕಾಕ್ರೋಚ್ ಜನತಾ ಪಾರ್ಟಿ, ಕಾಂಗ್ರೆಸ್ ಎರಡೂ ಒಂದೇ; ಇಲ್ಲಿ ನಿಮ್ಮನ್ನೂ ಯಾರೂ ಬಂಧಿಸಲ್ಲ: ಪ್ರಿಯಾಂಕ್ ಖರ್ಗೆ ಸ್ಫೋಟಕ ಹೇಳಿಕೆ!

ಪೊಲೀಸ್ ಕಮಿಷನರ್ ಕಚೇರಿ ಮುಂದೆ HDK ಧರಣಿ: ಸ್ಟಿಂಗ್‌ ರೂವಾರಿಯ ಬಂಧನಕ್ಕೆ ಆಗ್ರಹ; ಎರಡು ದಿನಗಳ ಡೆಡ್‌ಲೈನ್‌!

Indian Stock Market: ಕೊನೆಗೂ ಪುಟಿದಿದ್ದ ಭಾರತೀಯ ಷೇರು ಮಾರುಕಟ್ಟೆ, ಸೆನ್ಸೆಕ್ಸ್ ದಾಖಲೆಯ ಏರಿಕೆ

T20 ಕ್ರಿಕೆಟ್ ಇತಿಹಾಸದಲ್ಲಿ ಯಾರೂ ಮಾಡದ ಅಪರೂಪದ ವಿಶ್ವ ದಾಖಲೆ ಬರೆದ ಪಾಕ್ ಕ್ಯಾಪ್ಟನ್!