ಸಂಗ್ರಹ ಚಿತ್ರ 
ದೇಶ

ಚುನಾವಣೆ ಮುನ್ನಾ ದಿನವೇ ಛತ್ತೀಸ್ಗಢದಲ್ಲಿ ನಕ್ಸಲರ ದಾಳಿ: ಓರ್ವ ನಕ್ಸಲ್'ನನ್ನು ಹೊಡೆದುರುಳಿಸಿದ ಸೇನೆ

ಛತ್ತೀಸ್ಗಢದ ವಿಧಾನಸಭೆ ಚುನಾವಣೆಗೆ ಕೇವಲ ಒಂದು ದಿನ ಬಾಕಿಯಿದ್ದು, ಈ ನಡುವಲ್ಲೇ ಅಂತಗರ್ ಗ್ರಾಮದ ಸಮೀಪ ನಕ್ಸಲರು ದಾಳಿ ನಡೆಸಿದ್ದು, 7 ಬಾಂಬ್ ಗಳನ್ನು ಸ್ಫೋಟಿಸಿದ್ದಾರೆ...

ರಾಯ್ಪುರ: ಛತ್ತೀಸ್ಗಢದ ವಿಧಾನಸಭೆ ಚುನಾವಣೆಗೆ ಕೇವಲ ಒಂದು ದಿನ ಬಾಕಿಯಿದ್ದು, ಈ ನಡುವಲ್ಲೇ ಅಂತಗರ್ ಗ್ರಾಮದ ಸಮೀಪ ನಕ್ಸಲರು ದಾಳಿ ನಡೆಸಿದ್ದು, 7 ಬಾಂಬ್ ಗಳನ್ನು ಸ್ಫೋಟಿಸಿದ್ದಾರೆ. 
ಗಸ್ತು ಕರ್ತವ್ಯಕ್ಕೆ ತೆರಳಿದ್ದ ಬಿಎಸ್ಎಫ್ ಪಡೆಗಳ ಮೇಲೆ ನಕ್ಸಲರು ಏಕಾಏಕಿ ದಾಳಿ ನಡೆಸಿದ್ದು, ಈ ವೇಳೆ ನಕ್ಸಲರ ವಿರುದ್ಧ ಎನ್'ಕೌಂಟರ್ ನಡೆಸಿರುವ ಸೇನೆ ಓರ್ವ ನಕ್ಸಲ್'ನನ್ನು ಹೊಡೆದುರುಳಿಸಿದೆ. 
ಘಟನೆಯಲ್ಲಿ ಓರ್ವ ಬಿಎಸ್ಎಫ್ ಯೋಧ ಕೂಡ ಗಾಯಗೊಂಡಿದ್ದು ಪ್ರಸ್ತುತ ಸ್ಥಳದಲ್ಲಿ ಯೋಧರು ಹಾಗೂ ನಕ್ಸಲರ ನಡುವೆ ಭಾರೀ ಗುಂಡಿನ ಚಕಮಕಿ ನಡೆಯುತ್ತಿದೆ ಎಂದು ತಿಳಿದುಬಂದಿದೆ. 
ಘಟನೆಯಲ್ಲಿ ಓರ್ವ ಬಿಎಸ್ಎಫ್ ಯೋಧ ಕೂಡ ಗಾಯಗೊಂಡಿದ್ದು ಪ್ರಸ್ತುತ ಸ್ಥಳದಲ್ಲಿ ಯೋಧರು ಹಾಗೂ ನಕ್ಸಲರ ನಡುವೆ ಭಾರೀ ಗುಂಡಿನ ಚಕಮಕಿ ನಡೆಯುತ್ತಿದೆ ಎಂದು ತಿಳಿದುಬಂದಿದೆ. 

ಸಮವಸ್ತ್ರದಲ್ಲಿರುವ ನಕ್ಸಲನ ಮೃತದೇಹವನ್ನು ಭದ್ರತಾ ಪಡೆಗಳು ವಶಕ್ಕೆ ಪಡೆದುಕೊಂಡಿದ್ದು, ಕಾರ್ಯಚರಣೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ನಡುವೆ ಚುನಾವಣೆ ಹಿನ್ನಲೆಯಲ್ಲಿ ಛತ್ತೀಸ್ಗಢದ 7 ಜಿಲ್ಲೆಗಳಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ಮೊದಲ ಹಂತದಲ್ಲಿ ಮಾವೋವಾದಿಗಳ ಪ್ರಭಾವ ಇರುವ 18 ಕ್ಷೇತ್ರಗಳಲ್ಲಿ ನಾಳೆ ಚುನಾವಣೆ ನಡೆಯಲಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

SIR ವೇಳೆ ಡಿಲೀಟ್ ಆಗಿರುವ 13.3 ಕೋಟಿ ಮತದಾರರ ಪತ್ತೆಗೆ ಕಾಂಗ್ರೆಸ್‌ನಿಂದ ‘ಮತ ರಕ್ಷಕ’ರ ನೇಮಕ!

'ಸ್ಪಾದಲ್ಲಿ ಅಕ್ರಮ ಚಟುವಟಿಕೆ' ಎಂದು ಆರೋಪಿಸಿ ದಾಂಧಲೆ; 5 ಲಕ್ಷ ರೂ ಗೆ ಬೇಡಿಕೆ, 1 ಲಕ್ಷ ವಸೂಲಿ! ಶಾಕಿಂಗ್ ಘಟನೆ

'ಇತಿಹಾಸ ನಿಮ್ಮನ್ನು ಇನ್ನಷ್ಟು ಗೌರವದಿಂದ ನೆನಪಿಸಿಕೊಳ್ಳಲಿದೆ'; Agarkarಗೆ ಗೇಟ್ ಪಾಸ್`, ಗಂಭೀರ್‌ ಭಾವುಕ ಸಂದೇಶ!

Bigg Boss Kannada: ಟಾಸ್ಕ್ ವೇಳೆ ಕುಸಿದು ಬಿದ್ದ ನಟಿ ಸಂಗೀತಾ ಭಟ್; ಆರೋಗ್ಯದಲ್ಲಿ ಏರುಪೇರು! ವಿಡಿಯೋ ವೈರಲ್