ಜಗನ್ ಮೋಹನ್ ರೆಡ್ಡಿ 
ದೇಶ

ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸದಿರಲು ವೈಎಸ್ ಆರ್ ಕಾಂಗ್ರೆಸ್ ನಿರ್ಧಾರ

ಡಿಸೆಂಬರ್ 7ರಂದು ನಡೆಯಲಿರುವ ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸದಿರಲು ಜಗನ್ ಮೋಹನ್....

ಅಮರಾವತಿ: ಡಿಸೆಂಬರ್ 7ರಂದು ನಡೆಯಲಿರುವ ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸದಿರಲು ಜಗನ್ ಮೋಹನ್ ರೆಡ್ಡಿ ನೇತೃತ್ವದ ವೈಎಸ್ ಆರ್ ಕಾಂಗ್ರೆಸ್ ನಿರ್ಧರಿಸಿದೆ.
2019ರ ಆಂಧ್ರ ಪ್ರದೇಶದ ಚುನಾವಣೆ ಕಡೆ ಸಂಪೂರ್ಣ ಗಮನಹರಿಸುವುದಕ್ಕಾಗಿ ತೆಲಂಗಾಣ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುತ್ತಿಲ್ಲ. ಆದರೆ 2024ರಲ್ಲಿ ನಡೆಯುವ ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ವೈಎಸ್ ಆರ್ ಕಾಂಗ್ರೆಸ್ ಇಂದು ಪ್ರಕಟಣೆಯಲ್ಲಿ ತಿಳಿಸಿದೆ.
ತೆಲಂಗಾಣದಲ್ಲಿ ಕಳೆದ ನಾಲ್ಕು ವರ್ಷಗಳಲ್ಲಿ ನಡೆದ ಬೆಳವಣಿಗೆಗಳನ್ನು ಗಮನದಲ್ಲಿಟ್ಟುಕೊಂಡು ಈ ಬಾರಿ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸದಿರಲು ನಿರ್ಧರಿಸಲಾಗಿದೆ ಎಂದು ವೈಎಸ್ಆರ್ ಕೇಂದ್ರ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.
2014ರಲ್ಲಿ ನಡೆದ ತೆಲಂಗಾಣ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಯಲ್ಲಿ ವೈಎಸ್ ಆರ್ ಕಾಂಗ್ರೆಸ್ ಮೂರು ವಿಧಾನಸಭೆ ಕ್ಷೇತ್ರಗಳಲ್ಲಿ ಮತ್ತು ಒಂದು ಲೋಕಸಭಾ ಕ್ಷೇತ್ರದಲ್ಲಿ ಗೆಲುವು ಸಾಧಿಸಿತ್ತು. ಆದರೆ ನಂತರ ಆ ಮೂವರು ಶಾಸಕರು ಆಡಳಿತರೂಢ ಟಿಆರ್ ಎಸ್ ಸೇರಿಕೊಂಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ