ಮತದಾನ ಚಿತ್ರ 
ದೇಶ

ಛತ್ತೀಸ್ ಘಡ ಚುನಾವಣೆ: ಬಿಜಾಪುರ ಬಳಿ ಎನ್ ಕೌಂಟರ್ ನಲ್ಲಿ ಐವರು ನಕ್ಸಲೀಯರ ಹತ್ಯೆ

ನಕ್ಸಲ್ ದಾಳಿ ಬೆದರಿಕೆ ನಡುವೆಯೂ ಛತ್ತೀಸ್ ಘಡದ 18 ವಿಧಾನಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ವಿಧಾನಸಭಾ ಚುನಾವಣೆ ಬಿಗಿ ಭದ್ರತೆಯಲ್ಲಿ ನಡೆಯಿತು.

ರಾಯಘಡ:  ನಕ್ಸಲ್ ದಾಳಿ  ಬೆದರಿಕೆ ನಡುವೆಯೂ  ಛತ್ತೀಸ್ ಘಡದ 18 ವಿಧಾನಸಭಾ ಕ್ಷೇತ್ರಗಳಲ್ಲಿ  ಮೊದಲ ಹಂತದ ವಿಧಾನಸಭಾ ಚುನಾವಣೆ ಬಿಗಿ ಭದ್ರತೆಯಲ್ಲಿ ನಡೆಯಿತು.

ಉಳಿದ 72 ಸ್ಥಾನಗಳಲ್ಲಿ ನವೆಂಬರ್ 20 ರಂದು ನೆರೆಯ ಮಧ್ಯಪ್ರದೇಶ, ರಾಜಸ್ತಾನ, ತೆಲಂಗಾಣ, ಹಾಗೂ ಮಿಜೋರಾಂ ರಾಜ್ಯಗಳ ಚುನಾವಣೆ ಸಂದರ್ಭದಲ್ಲಿ ಎರಡನೇ ಹಂತದಲ್ಲಿ  ಮತದಾನ ನಡೆಯಲಿದೆ.

ಈ ಮಧ್ಯೆ ಬಿಜಾಪುರ ಜಿಲ್ಲೆಯ ಪಮೇಡ್ ಬಳಿ ಭದ್ರತಾ ಪಡೆಗಳು ಹಾಗೂ ನಕ್ಸಲೀಯರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಐವರು ನಕ್ಸಲೀಯರು ಮೃತಪಟ್ಟಿದ್ದು, ಕೊಬ್ರಾ ಪಡೆಯ ಮೂರಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಕೋಬ್ರಾ ಪಡೆಯ ಎಲ್ಲಾ ಸಿಬ್ಬಂದಿ ಪ್ರಾಣಪಾಯದಿಂದ ಪಾರಾಗಿದ್ದಾರೆ ಎಂಬುದು ತಿಳಿದುಬಂದಿದೆ.

ನಕ್ಸಲೀಯರು ಗುಂಡಿನ ದಾಳಿ ಆರಂಭಿಸಿದಾಗ ಕೊಬ್ರಾ ತಂಡದಿಂದ ಪ್ರತಿದಾಳಿ ನಡೆಸಲಾಗಿದೆ. ಗುಂಡಿನ ಚಕಮಕಿಯಲ್ಲಿ  ಸಹಾಯಕ ಇನ್ಸ್ ಪೆಕ್ಟರ್ ಹಾಗೂ ಕಾನ್ಸ್ ಟೇಬಲ್ ಒಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ. ಆದಾಗ್ಯೂ ಅವರನ್ನು ಸುರಕ್ಷಿತವಾಗಿ ಪ್ರಾಣಪಾಯದಿಂದ ಪಾರು ಮಾಡಲಾಗಿದೆ. ಭದ್ರತಾ ಪಡೆಗಳು ಈಗಲೂ ಅರಣ್ಯದೊಳಗೆ ಇರುವುದಾಗಿ  ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್