ಛತ್ತೀಸ್ಗಢ: ಮೊದಲ ಹಂತದ ವಿಧಾನಸಭಾ ಚುನಾವಣೆ ಆರಂಭ 
ದೇಶ

ಛತ್ತೀಸ್ಗಢ: ಮೊದಲ ಹಂತದ ವಿಧಾನಸಭಾ ಚುನಾವಣೆ ಆರಂಭ

ಛತ್ತೀಸ್ಗಢ ವಿಧಾನಸಭೆ ಚುನಾವಣೆಯ ಮೊದಲ ಹಂತದಲ್ಲಿ ಸೋಮವಾರ ನಕ್ಸಲ್ ಪೀಡಿತ 8 ಜಿಲ್ಲೆಗಳ 18 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ಆರಂಭಗೊಂಡಿದೆ...

ರಾಯಪುರ: ಛತ್ತೀಸ್ಗಢ ವಿಧಾನಸಭೆ ಚುನಾವಣೆಯ ಮೊದಲ ಹಂತದಲ್ಲಿ ಸೋಮವಾರ ನಕ್ಸಲ್ ಪೀಡಿತ 8 ಜಿಲ್ಲೆಗಳ 18 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ಆರಂಭಗೊಂಡಿದೆ. 
ಈ ಚುನಾವಣೆ ಬಹಿಷ್ಕರಿಸುವಂತೆ ಈಗಾಗಲೇ ಕರೆ ನೀಡಿರುವ ನಕ್ಸಲರು, ವಿಧ್ವಂಸಕ ಕೃತ್ಯಗಳನ್ನು ಆರಂಭಿಸಿದ್ದು, ಈ ಹಿನ್ನಲೆಯಲ್ಲಿ ಛತ್ತೀಸ್ಗಢದಲ್ಲಿ ಬರೋಬ್ಬರಿ 1 ಲಕ್ಷಕ್ಕೂ ಅಧಿಕ ಪೊಲೀಸರನ್ನು ಚುನಾವಣಾ ಕಾರ್ಯಕ್ಕೆ ನಿಯೋಜಿಸಲಾಗಿದೆ. 
ಛತ್ತೀಸ್ಗಢ ರಾಜ್ಯದಲ್ಲಿ ಒಟ್ಟು 90 ಕ್ಷೇತ್ರಗಳಿವೆ. ಕಳೆದ 15 ವರ್ಷಗಳಿಂದ ಅಧಿಕಾರದಲ್ಲಿರುವ ಬಿಜೆಪಿ, ಸತತ 4ನೇ ಬಾರಿಗೆ ಗದ್ದುಗೆ ಹಿಡಿಯುವ ವಿಶ್ವಾಸದಲ್ಲಿದೆ. ಬಿಜೆಪಿ ಓಟ ತಡೆಯಲು ಕಾಂಗ್ರೆಸ್ ಶತಪ್ರಯತ್ನ ನಡೆಸುತ್ತಿದೆ. ಕಾಂಗ್ರೆಸ್ಸಿನ ಬಂಡಾಯ ನಾಯಕ ಅಜಿತ್ ಜೋಗಿ ಬಿಎಸ್'ಪಿ ಜೊತೆಯ ಮೈತ್ರಿ ಮಾಡಿಕೊಂಡು ಚುನಾವಣಾ ಕಣಕ್ಕೆ ಇಳಿದಿದ್ದು, ಜಾತ್ಯಾತೀತ ಮತ ವಿಭಜನೆಯಾಗುವ ಸಾಧ್ಯತೆ ಕಂಡು ಬರುತ್ತಿದೆ. 
ಮೊದಲ ಹಂತದಲ್ಲಿ 31.79 ಲಕ್ಷ ಮತದಾರರು ಇದ್ದು, 4336 ಮತಗಟ್ಟೆಗಳಿವೆ. ನಕ್ಸಲ್ ದಾಳಿ ಭೀತಿ ಹಿನ್ನೆಲೆಯಲ್ಲಿ ಚುನಾವಣಾ ಸಿಬ್ಬಂದಿಯನ್ನು ಹೆಲಿಕಾಪ್ಟರ್'ಗಳ ಮೂಲಕ ರವಾನೆ ಮಾಡಲಾಗಿದೆ. 
ಚುನಾವಣಾ ಪ್ರಕ್ರಿಯೆ ಹಾಳುಗೆಡಲು ಕಳೆದ 15 ದಿನಗಳಲ್ಲಿ ನಕ್ಸಲರು ಸಾಕಷ್ಟು ದಾಳಿಗಳನ್ನು ನಡೆಸಿದ್ದಾರೆ. 13 ಮಂದಿಯನ್ನು ಬಲಿ ಪಡೆದುಕೊಂಡಿದ್ದಾರೆ. ಆದರೆ, ಡ್ರೋನ್ ಕ್ಯಾಮೆರಾ ನಿಯೋಜಿಸಿ, ನಕ್ಸಲರ ಚಲನವಲನಗಳ ಮೇಲೆ ಹದ್ದಿನ ಕಣ್ಣು ಇಡಲಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT