ಛತ್ತೀಸ್ಗಢ ರಾಜ್ಯದ ಬಿಲಾಸ್ಪುರದಲ್ಲಿ ನಡೆದ ರ್ಯಾಲಿಯಲ್ಲಿ ಮಾತನಾಡುತ್ತಿರುವ ಪ್ರಧಾನಿ ಮೋದಿ 
ದೇಶ

ಬಿಜೆಪಿ ವಿರುದ್ಧ ಹೇಗೆ ಹೋರಾಡಬೇಕೆಂಬುದು ಈಗಲೂ ವಿಪಕ್ಷಗಳಿಗೆ ತಿಳಿದಿಲ್ಲ: ಪ್ರಧಾನಿ ಮೋದಿ

ಬಿಜೆಪಿ ವಿರುದ್ಧ ಹೇಗೆ ಹೋರಾಡಬೇಕೆಂಬುದು ವಿರೋಧ ಪಕ್ಷಗಳಿಗೆ ಈಗಲೂ ತಿಳಿಸಿಲ್ಲ. ನಾವು ಅಭಿವೃದ್ಧಿಯತ್ತ ಗಮನ ಹರಿಸಿದ್ದೇವೆ. ಜಾತಿ ಭೇದಗಳಿಗೆ ಮೀರಿ ನಾವು ಅಭಿವೃದ್ಧಿಗಾಗಿ ದುಡಿಯುತ್ತಿದ್ದೇವೆಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸೋಮವಾರ ಹೇಳಿದ್ದಾರೆ...

ಬಿಲಾಸ್ಪುರ: ಬಿಜೆಪಿ ವಿರುದ್ಧ ಹೇಗೆ ಹೋರಾಡಬೇಕೆಂಬುದು ವಿರೋಧ ಪಕ್ಷಗಳಿಗೆ ಈಗಲೂ ತಿಳಿಸಿಲ್ಲ. ನಾವು ಅಭಿವೃದ್ಧಿಯತ್ತ ಗಮನ ಹರಿಸಿದ್ದೇವೆ. ಜಾತಿ ಭೇದಗಳಿಗೆ ಮೀರಿ ನಾವು ಅಭಿವೃದ್ಧಿಗಾಗಿ ದುಡಿಯುತ್ತಿದ್ದೇವೆಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸೋಮವಾರ ಹೇಳಿದ್ದಾರೆ. 
ಛತ್ತೀಸ್ಗಢ ರಾಜ್ಯದ ಬಿಲಾಸ್ಪುರದಲ್ಲಿ ನಡೆದ ರ್ಯಾಲಿಯಲ್ಲಿ ಮಾತನಾಡಿರುವ ಅವರು, ವಿರೋಧ ಪಕ್ಷಗಳಿಗೆ ಈಗಲೂ ಬಿಜೆಪಿ ವಿರುದ್ಧ ಹೋರಾಡುವುದು ಹೇಗೆ ಎಂಬುದು ತಿಳಿದಿಲ್ಲ. ನಾವು ಜಾತಿ ಬೇಧಗಳಿಗೆ ಮೀರಿ ಅಭಿವೃದ್ಧಿಗಾಗಿ ಶ್ರಮಿಸುತ್ತಿದ್ದೇವೆ. ಛತ್ತೀಸ್ಗಢದಲ್ಲಿ ಎಲ್ಲಿಯೇ ಹೋದರೂ ನೀವು ಅಭಿವೃದ್ಧಿಯನ್ನು ಕಾಣಬಹುದು ಎಂದು ಹೇಳಿದ್ದಾರೆ. 
ಇತ್ತೀಚೆಗಷ್ಟೇ ಕಾಂಗ್ರೆಸ್ ಛತ್ತೀಸ್ಗಢ ರಾಜ್ಯದ ಜನತೆಗಾಗಿ 36 ಅಂಶಗಳನ್ನೊಳಗೊಂಡ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಪ್ರಣಾಳಿಕೆ ಬಿಡುಗಡೆ ವೇಳೆ ನಾಮ್‌ದಾರ್ ಅವರನ್ನು ಸರ್ ಎಂದು 150 ಬಾರಿ ಕರೆಯಲಾಯಿತು. ಇದರ ಅರ್ಧ ಛತ್ತೀಸ್ಗಢದ ಪ್ರಾಮುಖ್ಯತೆ ನಾಮ್‌ದಾರ್'ಗಿಂತಲೂ ಕಡಿಮೆಯೆಂಬುದು ತೋರಿಸುತ್ತದೆ ಎಂದು ವಾಗ್ದಾಳಿ ನಡೆಸಿದ್ದಾರೆ. 
ಬಸ್ತಾರ್ ಪ್ರದೇಶದಲ್ಲಿ ಹೆಚ್ಚು ಸಂಖ್ಯೆಯಲ್ಲಿ ಮತದಾನ ಮಾಡುವಂತೆ ಜನರ ಬಳಿ ಮನವಿ ಮಾಡಿಕೊಂಡಿದ್ದೇನೆ. 2ನೇ ಹಂತದ ಚುನಾವಣೆಯಲ್ಲಿಯೂ ಜನರು ಹೆಚ್ಚೆಚ್ಚು ಸಂಖ್ಯೆಯಲ್ಲಿ ಮತದಾನ ಮಾಡುತ್ತಾರೆಂಬ ನಂಬಿಕೆಯಿದೆ. ಪೆಹ್ಲೆ ಮತದಾನ್, ಫಿರ್ ಜಲ್ಪಾನ್ (ಮೊದಲು ಮತದಾನ ನಂತರ ಜಲಸ್ನಾನ) ಮಂತ್ರವನ್ನು ಜನರು ಪಠಿಸಬೇಕೆಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ