ಸಂಗ್ರಹ ಚಿತ್ರ 
ದೇಶ

ಕೇಂದ್ರ ಸಚಿವ ಅನಂತ್ ಕುಮಾರ್ ವಿಧಿವಶ: ಅಂತಿಮ ದರ್ಶನಕ್ಕೆ ಬೆಂಗಳೂರಿನತ್ತ ಪ್ರಧಾನಿ ಮೋದಿ

ಬಹು ಅಂಗಾಂಗ ವೈಫಲ್ಯದಿಂದಾಗಿ ಕೇಂದ್ರ ಸಚಿವ ಅನಂತ್ ಕುಮಾರ್ ಅವರು ವಿಧಿವಶರಾಗಿದ್ದು, ಈ ಹಿನ್ನಲೆಯಲ್ಲಿ ಅಂತಿಮ ದರ್ಶನ ಪಡೆಯಲು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಂಗಳವಾರ ಬೆಂಗಳೂರಿಗೆ ಆಗಮಿಸಲಿದ್ದಾರೆ...

ನವದೆಹಲಿ: ಬಹು ಅಂಗಾಂಗ ವೈಫಲ್ಯದಿಂದಾಗಿ ಕೇಂದ್ರ ಸಚಿವ ಅನಂತ್ ಕುಮಾರ್ ಅವರು ವಿಧಿವಶರಾಗಿದ್ದು, ಈ ಹಿನ್ನಲೆಯಲ್ಲಿ ಅಂತಿಮ ದರ್ಶನ ಪಡೆಯಲು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಂಗಳವಾರ ಬೆಂಗಳೂರಿಗೆ ಆಗಮಿಸಲಿದ್ದಾರೆ. 
ಇಂದು ಬೆಳಿಗ್ಗೆ 10.30ರ ಸುಮಾರಿಗೆ ವಿಶೇಷ ವಿಮಾನದ ಮೂಲಕ ಪ್ರಧಾನಿ ಮೋದಿಯವರು ಬೆಂಗಳೂರಿಗೆ ಆಗಮಿಸಲಿದ್ದು, ಅಂತಿಮ ದರ್ಶನ ಪಡೆಯಲಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ. ಆದರೆ, ಈ ಕುರಿತು ಪ್ರಧಾನಿಮಂತ್ರಿಗಳ ಕಾರ್ಯಾಲಯ ಅಧಿಕೃತ ಮಾಹಿತಿಗಳನ್ನು ಘೋಷಣೆ ಮಾಡಿಲ್ಲ.
ಅನಂತ್ ಕುಮಾರ್ ಅವರ ಪಾರ್ಥಿವ ಶರೀರವನ್ನು ಇಂದು ಬೆಳಿಗ್ಗೆ 8 ರಿಂದಲೇ ನಗರದ ಬಸವನಗುಡಿಯ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇರಿಸಲಿದ್ದು, ಇದಕ್ಕಾಗಿ ಸಕಲ ಭದ್ರತಾ ಕ್ರಮಗಳನ್ನು ಕಾೈಗೊಳ್ಳಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ