ಸ್ಟಾಲಿನ್ ಭೇಟಿ ಮಾಡಿದ ಸೀತಾರಾಮ್ ಯೆಚೂರಿ
ಚೆನ್ನೈ: ಕೇಂದ್ರದ ಆಡಳಿತರೂಢ ಬಿಜೆಪಿ ವಿರುದ್ಧ ಸಿಪಿಎಂ ಮತ್ತು ಡಿಎಂಕೆ ಒಂದಾಗಿದ್ದು, 2019ರ ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳುವುದಾಗಿ ಉಭಯ ಪಕ್ಷಗಳು ಮಂಗಳವಾರ ಘೋಷಿಸಿವೆ.
ಇಂದು ಚೆನ್ನೈನಲ್ಲಿ ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರನ್ನು ಭೇಟಿ ಮಾಡಿದ ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಅವರು, ಮುಂದಿನ ಲೋಕಸಭೆ ಚುನಾವಣೆಯಲ್ಲಿ ಸಿಪಿಎಂ ಮತ್ತು ಡಿಎಂಕೆ ತಮಿಳುನಾಡಿನಲ್ಲಿ ಒಟ್ಟಿಗೆ ಸ್ಪರ್ಧಿಸಲಿವೆ ಎಂದು ಹೇಳಿದ್ದಾರೆ.
ಏಕತೆ, ಭಾರತದ ಸಮಗ್ರತೆ ದೇಶದ ಸಾಂವಿಧಾನಿಕ ಸಂಸ್ಥೆಗಳನ್ನು ರಕ್ಷಿಸುವುದಕ್ಕಾಗಿ ನಾವು ಒಂದಾಗಿದ್ದೇವೆ ಎಂದು ಸ್ಟಾಲಿನ್ ಭೇಟಿಯ ಬಳಿಕ ಯೆಚೂರಿ ಅವರು ತಿಳಿಸಿದ್ದಾರೆ.
ಇನ್ನು ಎಡರಂಗದ ನಾಯಕನ ಭೇಟಿಯ ಬಗ್ಗೆ ಟ್ವೀಟ್ ಮಾಡಿರುವ ಸ್ಟಾಲಿನ್ ಅವರು, 2019ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ಸಿಪಿಎಂ ಜೊತೆ ಮೈತ್ರಿ ಮಾಡಿಕೊಳ್ಳುವ ಬಗ್ಗೆ ವಿವರವಾಗಿ ಚರ್ಚಿಸಿದ್ದೇವೆ ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics