ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಉಂಟಾಗಿರುವ ಗಜ ಚಂಡಮಾರುತದ ಪರಿಣಾಮ ನಗರದಲ್ಲಿ ಗುರುವಾರ ಮತ್ತು ಶುಕ್ರವಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ವಾಯುಭಾರ ಕುಸಿತದಿಂದಾಗಿ ಉಂಟಾಗಿರುವ ಗಜ ಚಂಡಮಾರುತ ಮುಂದಿನ 24 ಗಂಟೆಗಳಲ್ಲಿ ತಮಿಳುನಾಡು ಪೂರ್ವ ಕರಾವಳಿಗೆ ಅಪ್ಪಳಿಸಲಿದ್ದು, ಇದರ ಪರಿಣಾಮ ತಮಿಳುನಾಡಜು ಕರಾವಳಿಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಪ್ರಸ್ತುತ ತಮಿಳುನಾಡು ಕರಾವಳಿಯತ್ತ ಧಾವಿಸುತ್ತಿರುವ ಗಜ ಚಂಡಮಾರುತ ದಕ್ಷಿಣ ಆಂಧ್ರ ಪ್ರದೇಶ ಕರಾವಳಿಯಲ್ಲೂ ಭಾರಿ ಮಳೆ ಆತಂಕ ಸೃಷ್ಟಿ ಮಾಡಿದೆ.
ಆದರೆ ತಮಿಳುನಾಡು ಗಡಿದಾಟುತ್ತಿದ್ದಂತೆಯೇ ಗಜ ಚಂಡಮಾರುತದ ಪ್ರಭಾವ ಕೊಂಚ ತಗ್ಗಿದೆ. ಚಂಡಮಾರುತದ ವೇಗ ಕಡಿಮೆಯಾಗಿದೆಯಾದರೂ ಭಾರಿ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ನವೆಂಬರ್ 1ರ ಹೊತ್ತಿಗೆ ಕರಾವಳಿಗೆ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದೆ.