ವಿಚಾರವಾದಿ ನರೇಂದ್ರ ದಾಬೋಲ್ಕರ್ 
ದೇಶ

ದಾಬೋಲ್ಕರ್ ಹತ್ಯೆ ಪ್ರಕರಣ: ಬಂಧಿತ ಆರೋಪಿಗಳ ವಿರುದ್ಧ ಭಯೋತ್ಪಾದನಾ ಪ್ರಕರಣ ದಾಖಲಿಸಿದ ಸಿಬಿಐ

ವಿಚಾರವಾದಿ ನರೇಂದ್ರ ದಾಬೋಲ್ಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಆರೋಪಿಗಳು ಭಯೋತ್ಪಾದನಾ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಹಿನ್ನಲೆಯಲ್ಲಿ ಆರೋಪಿಗಳ ವಿರುದ್ಧ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಭಯೋತ್ಪಾದನಾ ಪ್ರಕರಣಗಳನ್ನು...

ಪುಣೆ: ವಿಚಾರವಾದಿ ನರೇಂದ್ರ ದಾಬೋಲ್ಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಆರೋಪಿಗಳು ಭಯೋತ್ಪಾದನಾ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಹಿನ್ನಲೆಯಲ್ಲಿ ಆರೋಪಿಗಳ ವಿರುದ್ಧ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಭಯೋತ್ಪಾದನಾ ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆಂದು ತಿಳಿದುಬಂದಿದೆ. 
ಆರೋಪಿಗಳ ಕುರಿತು ಸಿಬಿಐ ಅಧಿಕಾರಿಗಳು ನ್ಯಾಯಾಂಗ ಮ್ಯಾಜಿಸ್ಟ್ರೇಟ್ಗೆ ಸೋಮವಾರ ವರದಿ ಸಲ್ಲಿಸಿದೆ ಎಂದು ವರದಿಗಳು ತಿಳಿಸಿವೆ. 
ಆರೋಪಿಗಳ ವಿರುದ್ಧ ಸೆಕ್ಷನ್ 15 ಮತ್ತು 16 (ಭಯೋತ್ಪಾದನಾ ಕಾಯ್ದೆ, ಕಾನೂನಿಗೆ ವಿರುದ್ಧವಾದ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಪ್ರಕರಣಗಳನ್ನು ದಾಖಲು ಮಾಡಲಾಗಿದೆ ಎಂದು ಪಬ್ಲಿಕ್ ಪ್ರಾಸಿಕ್ಯೂಟರ್ ವಿಜಯ್ ಕುಮಾರ್ ಧಕಾನೆಯವರು ಹೇಳಿದ್ದಾರೆ. 
ದಾಬೋಲ್ಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ವರೆಗೂ ಹಿಂದೂ ಜಾಗೃತಿ ಸಮಿತಿ ಸದಸ್ಯರು ಹಾಗೂ ಇಎನ್'ಟಿ ಸರ್ಜನ್ ವೀರೇಂದ್ರಸಿನ್ಹ್ ತಾವ್ಡೆ, ಸಚಿನ್ ಅಂದುರೆ ಹಾಗೂ ಶರದ್ ಕಲಸ್ಕರ್ ಸೇರಿ ಒಟ್ಟು 6 ಮಂದಿ ಆರೋಪಿಗಳನ್ನು ಬಂಧನಕ್ಕೊಳಪಡಿಸಲಾಗಿದೆ. 
ಆರೋಪಿಗಳ ವಿರುದ್ಧ ಭಯೋತ್ಪಾದನಾ ಚಟುವಟಿಕೆ ಪ್ರಕರಣಗಳನ್ನು ದಾಖಲು ಮಾಡಿರುವ ಹಿನ್ನೆಲೆಯಲ್ಲಿ ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸರು ಸಿಬಿಐ ಅಧಿಕಾರಿಗಳಿಗೆ 90 ದಿನಗಳ ಕಾಲಾವಕಾಶ ದೊರೆಯಲಿದೆ ಎಂದು ಧಕಾನೆಯವರು ತಿಳಿಸಿದ್ದಾರೆ. 
ಪುಣೆಯ ಓಂಕಾರೇಶ್ವರ ಸೇತುವೆ ಬಳಿ 2013ರ ಆ.20 ರಂದು ದಾಬೋಲ್ಕರ್ ಅವರು ವಾಕಿಂಗ್ ಮಾಡುತ್ತಿದ್ದ ಸಂದರ್ಭದಲ್ಲಿ ಅಂದುರೆ ಹಾಗೂ ಕಲಸ್ಕರ್ ದಾಬೋಲ್ಕರ್ ಅವರನ್ನು ಗುಂಡಿಟ್ಟು ಹತ್ಯೆ ಮಾಡಿದ್ದರು ಎಂದು ಸಿಬಿಐ ಹೇಳಿದೆ. ಇದಲ್ಲದೆ, ಪ್ರಕರಣದಲ ಮಾಸ್ಟರ್ ಮೈಂಡ್ ತಾವ್ಡೆಯಂದೂ ಕೂಡ ಸಿಬಿಐ ಹೇಳಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!

'ಹನೂರು ಎನ್‌ಕೌಂಟರ್': ತಮಿಳುನಾಡು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ ಉದಯನಿಧಿ ಸ್ಟಾಲಿನ್! ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಆಗ್ರಹ