ನ.17 ರಂದು ಶಬರಿಮಲೆಗೆ ತೆರಳಲಿರುವ ತೃಪ್ತಿ ದೇಸಾಯಿ 
ದೇಶ

ನ.17 ರಂದು ಶಬರಿಮಲೆಗೆ ತೆರಳಲಿರುವ ತೃಪ್ತಿ ದೇಸಾಯಿ

ಶನಿ ಶಿಂಗ್ಣಾಪುರ ದೇವಾಲಯಕ್ಕೆ ಮಹಿಳೆಯರ ಪ್ರವೇಶ ನೀಡಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸಿದ್ದ ಸಾಮಾಜಿಕ ಕಾರ್ಯಕರ್ತೆ ತೃಪ್ತಿ ದೇಸಾಯಿ ನ.17 ರಂದು ಶಬರಿಮಲೆಗೆ ಹೋಗುವುದಾಗಿ ಹೇಳಿದ್ದಾರೆ.

ತಿರುವನಂತಪುರಂ: ಶನಿ ಶಿಂಗ್ಣಾಪುರ ದೇವಾಲಯಕ್ಕೆ ಮಹಿಳೆಯರ ಪ್ರವೇಶ ನೀಡಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸಿದ್ದ ಸಾಮಾಜಿಕ ಕಾರ್ಯಕರ್ತೆ ತೃಪ್ತಿ ದೇಸಾಯಿ ನ.17 ರಂದು ಶಬರಿಮಲೆಗೆ ಹೋಗುವುದಾಗಿ ಹೇಳಿದ್ದಾರೆ. 
ಮದಲ-ಮಕರವಿಲಕ್ಕು ಪೂಜೆ ಶನಿವಾರದಿಂದ ಪ್ರಾರಂಭವಾಗಲಿದ್ದು, ವಯಸ್ಸಿನ ಮಿತಿ ಇಲ್ಲದೇ ಮಹಿಳೆಯರಿಗೆ ಪ್ರವೇಶ ನೀಡಲು ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಈ ಹಿನ್ನೆಲೆಯಲ್ಲಿ ಶಬರಿಮಲೆ ದೇವಾಲಯಕ್ಕೆ ನ.17 ರಂದು ಭೇಟಿ ನೀಡುವುದಾಗಿ ತೃಪ್ತಿ ದೇಸಾಯಿ ಹೇಳಿದ್ದಾರೆ. ದೇವಾಲಯಕ್ಕೆ ಭೇಟಿ ನೀಡಲು ನಿರ್ಧರಿಸಿರುವ ಹಿನ್ನೆಲೆಯಲ್ಲಿ ತಮಗೆ ಬೆದರಿಕೆ ಬರುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಭದ್ರತೆ ನೀಡುವಂತೆ ಕೇರಳ ಸಿಎಂ ವಿಜಯ್ ಪಿಣರಾಯಿ ಅವರಿಗೆ ಇ-ಮೇಲ್ ಮೂಲಕ ಮನವಿ ಸಲ್ಲಿಸಿದ್ದಾರೆ. 
ಶಬರಿಮಲೆ ದೇವಾಲಯ ದರ್ಶನ ಮಾಡದೇ ಮಹಾರಾಷ್ಟ್ರಕ್ಕೆ ವಾಪಸ್ ಬರುವುದಿಲ್ಲ ಎಂದು ತೃಪ್ತಿ ದೇಸಾಯಿ ಹೇಳಿದ್ದು ಸರ್ಕಾರ ನಮಗೆ ಭದ್ರತೆ ನೀಡಲಿದೆ ಎಂಬ ಭರವಸೆಯಲ್ಲಿರುವುದಾಗಿ ಇ-ಮೇಲ್ ನಲ್ಲಿ ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?