ಸಾಂದರ್ಭಿಕ ಚಿತ್ರ 
ದೇಶ

ಮದ್ಯಪಾನ ಸೇವನೆ: ನಿರ್ದೇಶಕ ಹುದ್ದೆಯಿಂದ ಏರ್ ಇಂಡಿಯಾ ಕ್ಯಾಪ್ಟನ್ ಅರವಿಂದ್ ಕಠ್ಪಲಿಯಾ ವಜಾ

ಮದ್ಯಪಾನ ಸೇವನೆ: ನಿರ್ದೇಶಕ ಹುದ್ದೆಯಿಂದ ಏರ್ ಇಂಡಿಯಾ ಕ್ಯಾಪ್ಟನ್ ಅರವಿಂದ್ ಕಠ್ಪಲಿಯಾ ವಜಾ

ನವದೆಹಲಿ: ಇತ್ತೀಚಿಗೆ ಮದ್ಯಪಾನ ಮಾಡಿ ಸಿಕ್ಕಿಬಿದ್ದಿದ್ದ ಏರ್ ಇಂಡಿಯಾ ವಿಮಾನದ ಹಿರಿಯ ಕ್ಯಾಪ್ಟನ್ ಅರವಿಂದ್ ಕಠ್ಪಲಿಯಾ ಅವರನ್ನು ನಿರ್ದೇಶಕ(ಕಾರ್ಯಾಚರಣೆ) ಹುದ್ದೆಯಿಂದ ವಜಾಗೊಳಿಸಲಾಗಿದೆ.
ತಕ್ಷಣದಿಂದ ಜಾರಿಗೆ ಬರುವಂತೆ ಅರವಿಂದ್ ಕಠ್ಪಲಿಯಾ ಅವರನ್ನು ನಿರ್ದೇಶಕ(ಕಾರ್ಯಾಚರಣೆ) ಹುದ್ದೆಯಿಂದ ವಜಾಗೊಳಿಸಲಾಗಿದ್ದು, ಇಡಿ(ತರಬೇತಿ) ಕ್ಯಾಪ್ಟನ್ ಅಮಿತಾಭ್ ಸಿಂಗ್ ಅವರಿಗೆ ಹೆಚ್ಚುವರಿಯಾಗಿ ನಿರ್ದೇಶಕ(ಕಾರ್ಯಾಚರಣೆ) ಹೊಣೆ ವಹಿಸಲಾಗಿದೆ ಎಂದು ನಾಗರಿಕ ವಿಮಾನಯಾನ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.
ಇನ್ನು ಆಲ್ಕೊಹಾಲ್ ಪರೀಕ್ಷೆಯಲ್ಲಿ ಫೇಲ್ ಆಗಿದ್ದ ಕಠ್ಪಲಿಯಾ ಅವರ ಹಾರಾಟ ಪರವಾನಿಗೆಯನ್ನು ನಾಗರಿಕ ವಿಮಾನಯಾನ ನಿರ್ದೇಶನಾಲಯ ಮೂರು ವರ್ಷಗಳ ಕಾಲ ಅಮಾನತುಗೊಳಿಸಿದೆ.
ಕಳೆದ ಭಾನುವಾರ ದೆಹಲಿಯಿಂದ ಲಂಡನ್ ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನದ ಕ್ಯಾಪ್ಟನ್ ಅರವಿಂದ್ ಕಠ್ಪಲಿಯಾ ಮದ್ಯಪಾನ ಮಾಡಿ ಸಿಕ್ಕಿಬಿದ್ದ ಕಾರಣ ವಿಮಾನ ಸುಮಾರು ಆರು ಗಂಟೆ ತಡವಾಗಿ ಟೇಕ್‌ ಆಫ್ ಆಗಿತ್ತು. 
ಕ್ಯಾಪ್ಟನ್ ಅರವಿಂದ್ ಅವರು ಈ ಹಿಂದೆಯೂ 2017, ಜನವರಿ 19ರಂದು ಕುಡಿದು ಬಂದು ಸಿಕ್ಕಿಬಿದ್ದಿದ್ದರು. ಈ ಕುರಿತು ಅವರ ವಿರುದ್ಧ ಭಾರತೀಯ ಪೈಲಟ್ಸ್ ಸಂಘ ದೂರು ದಾಖಲಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್