ಮಧ್ಯಪ್ರದೇಶ ಚುನವಾಣೆ: ಮಹಿಳೆಯರ ಆಕ್ರೋಶಕ್ಕೆ ಗುರಿಯಾದ ಕಮಲ್ ನಾಥ್ 'ಅಲಂಕಾರ'ದ ಹೇಳಿಕೆ! 
ದೇಶ

ಮಧ್ಯಪ್ರದೇಶ ಚುನವಾಣೆ: ಮಹಿಳೆಯರ ಆಕ್ರೋಶಕ್ಕೆ ಗುರಿಯಾದ ಕಮಲ್ ನಾಥ್ 'ಅಲಂಕಾರ'ದ ಹೇಳಿಕೆ!

ಮಧ್ಯಪ್ರದೇಶ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಸಿದ್ಧತೆ ನಡೆಸಿದ್ದು, ಟಿಕೆಟ್ ಹಂಚಿಕೆ ವಿಷಯವಾಗಿ ಮಾಜಿ ಕೇಂದ್ರ ಸಚಿವ ಕಮಲ್ ನಾಥ್ ನೀಡಿರುವ ಹೇಳಿಕೆ ಭಾರಿ ಆಕ್ರೋಶಕ್ಕೆ ಗುರಿಯಾಗಿದೆ.

ಭೋಪಾಲ್: ಮಧ್ಯಪ್ರದೇಶ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಸಿದ್ಧತೆ ನಡೆಸಿದ್ದು, ಟಿಕೆಟ್ ಹಂಚಿಕೆ ವಿಷಯವಾಗಿ ಮಾಜಿ ಕೇಂದ್ರ ಸಚಿವ ಕಮಲ್ ನಾಥ್ ನೀಡಿರುವ ಹೇಳಿಕೆ ಭಾರಿ ಆಕ್ರೋಶಕ್ಕೆ ಗುರಿಯಾಗಿದೆ. 
ಟಿಕೆಟ್ ಹಂಚಿಕೆಯಲ್ಲಿ ಮಹಿಳೆಯರಿಗೆ ಕಡಿಮೆ ಸಂಖ್ಯೆಯಲ್ಲಿ ಟಿಕೆಟ್ ನೀಡಲಾಗಿದೆ ಎಂದು ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿರುವ ಕಮಲ್ ನಾಥ್, ಗೆಲ್ಲುವ ಮಹಿಳಾ ಅಭ್ಯರ್ಥಿಗಳಿಗೆ ಟಿಕೆಟ್ ನೀಡಲಾಗಿದೆ. ಕೋಟಾದ ಅಡಿಯಲ್ಲಿ ಅಥವಾ ಅಲಂಕಾರ 
ಮಾಡಿಕೊಳ್ಳುವ ಮಹಿಳೆಯರಿಗೆ ಟಿಕೆಟ್ ನೀಡಲಾಗಿಲ್ಲ ಎಂದು ಕಮಲ್ ನಾಥ್ ಹೇಳಿರುವುದು ಈಗ ವಿವಾದಕ್ಕೆ ಕಾರಣವಾಗಿದೆ. 
ಕಮಲ್ ನಾಥ್ ಅವರ "ಅಲಂಕಾರ" ಹೇಳಿಕೆಗೆ ಬಿಜೆಪಿ ತೀವ್ರ ವಿರೋಧ ವ್ಯಕ್ತಪಾಡಿಸಿದ್ದು, ಮಹಿಳೆಯರ ಬಗ್ಗೆ ಹಗುರ ಹೇಳಿಕೆ ನೀಡಿರುವ ಕಮಲ್ ನಾಥ್ ಕ್ಷಮೆ ಕೋರಬೇಕೆಂದು ಬಿಜೆಪಿ ಪಟ್ಟು ಹಿಡಿದಿದೆ. ಇದಕ್ಕೂ ಮುನ್ನ ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಆಡಳಿತಕ್ಕೆ ಬಂದರೆ ಆರ್ ಎಸ್ಎಸ್ ಶಾಖೆಗಳಿಗೆ ನಿರ್ಬಂಧ ವಿಧಿಸುವುದಾಗಿ ಹೇಳಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ; ರಾಜ್ಯಸಭಾ ಸದಸ್ಯತ್ವ ನಿರಾಕರಣೆ

ವಿದಾಯದ ಕೊನೇ ಕ್ಷಣದಲ್ಲೂ Siddaramaiah ಮಹತ್ವದ ಕ್ರಮ: ಆಪ್ತ ಕಾರ್ಯದರ್ಶಿ, ವಿಶೇಷಾಧಿಕಾರಿ ವರ್ಗಾವಣೆ

Siddaramaiah Press Meet: 'ಹೈಕಮಾಂಡ್ ಆದೇಶದ ಮೇಲೆ ರಾಜಿನಾಮೆ ನೀಡಿದ್ದೇನೆ': ಸಿದ್ದರಾಮಯ್ಯ ವಿದಾಯದ ಮಾತು

Siddaramaiah ರಾಜಿನಾಮೆ: 'ನಾನು ಆ ಪಕ್ಷದಲ್ಲಿ ಇಲ್ಲದೆ ಇರಬಹುದು, ಆದರೆ ಅವರೊಂದಿಗಿನ ಒಡನಾಟ ಮರೆಯುವಂತದ್ದಲ್ಲ': BC ಪಾಟೀಲ್ ಭಾವುಕ

ಕಾಂಗ್ರೆಸ್ಸಿನ ಕುರ್ಚಿ ಕಚ್ಚಾಟದ ಪ್ರಹಸನ: ಕನ್ನಡಿಗರಿಗೆ ನಯಾಪೈಸೆ ಪ್ರಯೋಜನ ಇಲ್ಲ- ಬಿಜೆಪಿ

SCROLL FOR NEXT