ಸಿಸಿಟಿವಿ ದೃಶ್ಯಾವಳಿ 
ದೇಶ

ವಿಡಿಯೋ: ರೈಲ್ವೇ ಪೊಲೀಸ್ ಸಿಬ್ಬಂದಿಯ ಸಾಹಸದಿಂದ ಬದುಕುಳಿದ ಪ್ರಯಾಣಿಕ!

ರೈಲ್ವೇ ಸಿಬ್ಬಂದಿಯ ಸಾಹಸ ಮತ್ತು ಸಮಯ ಪ್ರಜ್ಞೆಯಿಂದಾಗಿ ಅಪಾಯಕ್ಕೆ ಸಿಲುಕಿದ್ದ ರೈಲು ಪ್ರಯಾಣಿಕ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಚೆನ್ನೈನಲ್ಲಿ ನಡೆದಿದೆ.

ಚೆನ್ನೈ: ರೈಲ್ವೇ ಸಿಬ್ಬಂದಿಯ ಸಾಹಸ ಮತ್ತು ಸಮಯ ಪ್ರಜ್ಞೆಯಿಂದಾಗಿ ಅಪಾಯಕ್ಕೆ ಸಿಲುಕಿದ್ದ ರೈಲು ಪ್ರಯಾಣಿಕ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಚೆನ್ನೈನಲ್ಲಿ ನಡೆದಿದೆ.
ಚೆನ್ನೈನ ಎಗ್ಮೋರ್ ರೈಲು ನಿಲ್ದಾಣದಲ್ಲಿ ಸೋಮವಾರದಂದು ಈ ಘಟನೆ ನಡೆದಿದ್ದು, ಇದೀಗ ಈ ವಿಡಿಯೋ ವೈರಲ್ ಆಗಿದೆ.
ಎಗ್ಮೋರ್ ರೈಲು ನಿಲ್ದಾಣದಲ್ಲಿ ಚಲಿಸುತ್ತಿದ್ದ ರೈಲನ್ನು ಹತ್ತಲುಹೋದ ಪ್ರಯಾಣಿಕನೋರ್ವ ಆಯತಪ್ಪಿ ಬೀಳುವ ಹಂತಕ್ಕೆ ಬಂದಿದ್ದ. ರೈಲಿನ ಕಂಬಿ ಹಿಡಿದು ನೇತಾಡುತ್ತಿದ್ದ ವ್ಯಕ್ತಿಯನ್ನು ಗಮನಿಸಿದ ರೈಲ್ವೇ ಸುರಕ್ಷತಾ ಸಿಬ್ಬಂದಿ ಕೂಡಲೇ ಆತನನ್ನು ಹೊರಗೆ ಎಳೆದುಕೊಂಡರು. ಸಿಬ್ಬಂದಿ ಕೊಂಚ ತಡ ಮಾಡಿದ್ದರೂ ಆತ ಕೆಳಗೆ ಬಿದ್ದು ಅಪಾಯ ಸಂಭವಿಸುವ ಸಾಧ್ಯತೆ ಇತ್ತು.
ಆದರೆ ಸಿಬ್ಬಂದಿಯ ಸಮಯ ಪ್ರಜ್ಞೆ ಮತ್ತು ಸಾಹಸದಿಂದಾಗಿ ಸಂಭವಿಸಬಹುದಾದ ದುರಂತವೊಂದು ತಪ್ಪಿದಂತಾಗಿದೆ. ಇವಿಷ್ಟೂ ನಿಲ್ದಾಣದಲ್ಲಿ ಅಳವಡಿಸಲಾಗಿರುವ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಈ ವಿಡಿಯೋ ಇದೀಗ ವೈರಲ್ ಆಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT