ವೀರ್ ಸಾವರ್ಕರ್ 
ದೇಶ

ವೀರ್ ಸಾವರ್ಕರ್ ಬಗ್ಗೆ ಅವಹೇಳನಕಾರಿ ಮಾತು: ರಾಹುಲ್ ಗಾಂಧಿ ವಿರುದ್ಧ ದೂರು ದಾಖಲು!

ಹಿಂದುತ್ವ ರಾಯಭಾರಿ ಮತ್ತು ಸ್ವಾತಂತ್ರ್ಯ ಹೋರಾಟಗಾರ ದಿವಂಗತ ವೀರ್‌ ಸಾವರ್ಕರ್‌ ಬಗ್ಗೆ ಅವಹೇಳನಕಾರಿ ಮಾತುಗಳನ್ನಾಡಿದ್ದಾರೆ ಎಂದು ಆರೋಪಿಸಿ...

ಮುಂಬಯಿ: ಹಿಂದುತ್ವ ರಾಯಭಾರಿ ಮತ್ತು ಸ್ವಾತಂತ್ರ್ಯ ಹೋರಾಟಗಾರ ದಿವಂಗತ ವೀರ್‌ ಸಾವರ್ಕರ್‌ ಬಗ್ಗೆ ಅವಹೇಳನಕಾರಿ ಮಾತುಗಳನ್ನಾಡಿದ್ದಾರೆ ಎಂದು ಆರೋಪಿಸಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ದ ದೂರುದಾಖಲಿಸಲಾಗಿದೆ. 
ವೀರ ಸಾವರ್ಕರ್‌ ಅವರ ಮರಿ-ಸೋದರ ಸಂಧಿ ರಂಜೀತ್‌ ಸಾವರ್ಕರ್‌ ಅವರು ಮುಂಬಯಿ ಶಿವಾಜಿ ಪಾರ್ಕ್‌ ಪೊಲೀಸ್‌ ಠಾಣೆಯಲ್ಲಿ  ರಾಹುಲ್ ವಿರುದ್ದ ದೂರು ದಾಖಲಿಸಿದ್ದಾರೆ. 
ಸ್ವಾತಂತ್ರ್ಯ ಹೋರಾಟಗಾರನಾಗಿ ಜೈಲು ಸೇರಿದ್ದ ವೀರ್‌ ಸಾವರ್ಕರ್‌ ಅವರು ಬ್ರಿಟಿಷರ ಬಳಿ ತನ್ನನ್ನು   ಜೈಲಿನಿಂದ ಬಿಡುಗಡೆ ಮಾಡುವಂತೆ ಅಂಗಲಾಚಿದ್ದರು ಮತ್ತು ತನ್ನ ಕೃತ್ಯಗಳಿಗಾಗಿ ಕ್ಷಮೆಯಾಚಿಸಿದ್ದರು ಎಂದು ರಾಹುಲ್‌ ಗಾಂಧಿ ಚುನಾವಣಾ ಪ್ರಚಾರ ಭಾಷಣದಲ್ಲಿ ಹೇಳಿದ್ದರು. 
"ಸಾವರ್ಕರ್‌ ಅವರನ್ನು ಅವಮಾನಿಸುವ ಹೇಳಿಕೆ ನೀಡಿರುವ ಕಾರಣಕ್ಕೆ ನಾನು ರಾಹುಲ್‌ ಗಾಂಧಿ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದೇನೆ' ಎಂದು ರಂಜೀತ್‌ ಸಾವರ್ಕರ್‌ ಸುದ್ದಿಗಾರಿಗೆ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸತತ 3ನೇ ದಿನ SIR ವಿರುದ್ಧ ಪ್ರತಿಭಟನೆ: ರಾಜ್ ಘಾಟ್ ನತ್ತ ಇಂಡಿಯಾ ಬ್ಲಾಕ್ ಸಂಸದರ ಮೆರವಣಿಗೆ!

ಫ್ರೀಡಂ ಪಾರ್ಕ್‌ನಲ್ಲಿ CJP ಪ್ರತಿಭಟನೆ: ಜ್ಞಾನೇಶ್ ಹೋದರೆ ಅಜ್ಞಾನೇಶ್ ಬರುತ್ತಾನೆ; ಮೊದಲು SIR ರದ್ದುಗೊಳಿಸಿ - ಪ್ರಕಾಶ್ ರಾಜ್

'ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಿ ಟ್ರ್ಯಾಪ್​ ಮಾಡಲು ಯತ್ನ': ಡಿ.ಕೆ ಶಿವಕುಮಾರ್ ಸ್ಫೋಟಕ ಆರೋಪ; Video

Indian Stock Market ಮತ್ತೆ ಭಾರಿ ಕುಸಿತ; ಸೆನ್ಸೆಕ್ಸ್ 1,045 ಅಂಕ ಕುಸಿತ, 10 ಲಕ್ಷ ಕೋಟಿ ರೂ ನಷ್ಟ!

ಶಾಸಕರ ಲೆಟರ್‌ಹೆಡ್'ನಲ್ಲೇ 'ಸತ್ತಿದ್ದಾರೆ' ಎಂದು ಅರ್ಜಿ: ಯತ್ನಾಳ್ ಸೇರಿ ಮೂವರ ವಿರುದ್ಧ FIR ದಾಖಲು