ಸಾಂದರ್ಭಿಕ ಚಿತ್ರ 
ದೇಶ

ರಾಜಸ್ಥಾನ ಚುನಾವಣೆ: 4 ಸಚಿವರು ಸೇರಿ ಹಾಲಿ 43 ಬಿಜೆಪಿ ಶಾಸಕರಿಗೆ ಟಿಕೆಟ್ ನಕಾರ

ರಾಜಸ್ಥಾನದಲ್ಲಿ ಅಧಿಕಾರ ಉಳಿಸಿಕೊಳ್ಳಲು ಶತಾಯಗತಾಯ ಯತ್ನಿಸುತ್ತಿರುವ ಬಿಜೆಪಿ ನಾಲ್ವರು ಸಚಿವರು ಸೇರಿದಂತೆ 43 ಹಾಲಿ...

ಜೈಪುರ್: ರಾಜಸ್ಥಾನದಲ್ಲಿ ಅಧಿಕಾರ ಉಳಿಸಿಕೊಳ್ಳಲು ಶತಾಯಗತಾಯ ಯತ್ನಿಸುತ್ತಿರುವ ಬಿಜೆಪಿ ನಾಲ್ವರು ಸಚಿವರು ಸೇರಿದಂತೆ 43 ಹಾಲಿ ಶಾಸಕರಿಗೆ ಟಿಕೆಟ್ ನಿರಾಕರಿಸಿದ್ದು, ಟಿಕೆಟ್ ವಂಚಿತ ಹಲವು ಶಾಸಕರು ಈಗಾಗಲೇ ಬೇರೆ ಪಕ್ಷಕ್ಕೆ ಜಿಗಿದಿದ್ದಾರೆ.
200 ಸದಸ್ಯ ಬಲದ ರಾಜಸ್ಥಾನ ವಿಧಾನಸಭೆಗೆ ಡಿಸೆಂಬರ್ 7ರಂದು ಚುನಾವಣೆ ನಡೆಯುತ್ತಿದ್ದು, ಆಡಳಿತರೂಢ ಬಿಜೆಪಿ ಈಗಾಗಲೇ ಅಭ್ಯರ್ಥಿಗಳ ಎರಡು ಪಟ್ಟಿಯನ್ನು ಬಿಡುಗಡೆ ಮಾಡಿದೆ. ಶೀಘ್ರದಲ್ಲಿ ಮತ್ತೊಂದು ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುವ ಸಾಧ್ಯತೆ ಇದೆ.
ಮೊದಲ ಮತ್ತು ಎರಡನೇ ಪಟ್ಟಿಯಲ್ಲಿ ನಾಲ್ವರು ಸಚಿವರು ಸೇರಿದಂತೆ 43 ಹಾಲಿ ಶಾಸಕರಿಗೆ ಕೇಸರಿ ಪಡೆ ಕೊಕ್ ನೀಡಿದ್ದು, ಈಗ ಭಿನ್ನಮತದ ಭೀತಿ ಎದುರಾಗಿದೆ.
ಮೊದಲ ಪಟ್ಟಿಯಲ್ಲಿ ಐದು ಬಾರಿ ಶಾಸಕರಾಗಿದ್ದ ಮಾಜಿ ಸಚಿವ ಸುರೇಂದ್ರ ಗೋಯಲ್ ಅವರಿಗೆ ಟಿಕೆಟ್ ನೀಡದ ಹಿನ್ನೆಲೆಯಲ್ಲಿ ಅವರು ಈಗಾಗಲೇ ಕಾಂಗ್ರೆಸ್ ಸೇರಿದ್ದು, ಹಲವು ಶಾಸಕರು ಅವರ ದಾರಿಯನ್ನೇ ತುಳಿಯುವ ಸಾಧ್ಯತೆ ಇದೆ.
ಟಿಕೆಟ್ ವಂಚಿತ ಬಿಜೆಪಿ ಶಾಸಕರ ಅಭಿಮಾನಿಗಳು ಮಂಗಳವಾರ ರಾಜ್ಯಾದ್ಯಂತ ಪ್ರತಿಭಟನೆ ನಡೆಸಿದ್ದು, ಬಿಜೆಪಿ ಮುಖಂಡರಿಗೆ ತಲೆನೋವಾಗಿ ಪರಿಣಮಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ಸಿಎಂ ಸ್ಥಾನಕ್ಕೆ ರಾಜೀನಾಮೆ?

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ: ಕಣ್ಣೀರಿಟ್ಟ CM ಕಚೇರಿ ಸಿಬ್ಬಂದಿ; ಬೆಂಬಲಿಗರಿಂದ ಪ್ರತಿಭಟನೆ

SCROLL FOR NEXT