ನಾಗಪಟ್ಟಣಂನಲ್ಲಿ ಮಳೆ, ಗಾಳಿಗೆ ಧರೆಗುರುಳಿದ ಮರಗಳನ್ನು ತೆರವುಗೊಳಿಸುತ್ತಿರುವ ಸಿಬ್ಬಂದಿ 
ದೇಶ

ತಮಿಳುನಾಡು: 'ಗಜ'ದ ಅಬ್ಬರಕ್ಕೆ 11 ಮಂದಿ ಬಲಿ

ಗಜ ಚಂಡಮಾರುತ ತಮಿಳುನಾಡಿನ ಹಲವು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಬೀಸುತ್ತಿದ್ದು, ಪ್ರಾಕೃತಿಕ ವಿಕೋಪದ ...

ಚೆನ್ನೈ: ಗಜ ಚಂಡಮಾರುತ ತಮಿಳುನಾಡಿನ ಹಲವು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಬೀಸುತ್ತಿದ್ದು, ಪ್ರಾಕೃತಿಕ ವಿಕೋಪದ ಪರಿಣಾಮ ಇದುವರೆಗೆ 11 ಮಂದಿ ಮೃತಪಟ್ಟಿದ್ದಾರೆ.  ಮೃತಪಟ್ಟವರ ಕುಟುಂಬಗಳಿಗೆ ತಲಾ 10 ಲಕ್ಷ ರೂಪಾಯಿ ಪರಿಹಾರವನ್ನು ಮುಖ್ಯಮಂತ್ರಿ ಎಡಪ್ಪಾಡಿ ಕೆ ಪಳನಿಸ್ವಾಮಿ ಘೋಷಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಕದ್ದಲೂರು ಜಿಲ್ಲೆಯಲ್ಲಿ ಇಂದು ಕಾಲಿಟ್ಟ ಗಜ ಚಂಡಮಾರುತದ ತೀವ್ರತೆಗೆ ಇಬ್ಬರು ಬಲಿಯಾಗಿದ್ದಾರೆ. ಅವರ ಕುಟುಂಬಗಳಿಗೆ ಹೆಚ್ಚಿನ ಆರ್ಥಿಕ ನೆರವು ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಕೂಡ ಆಗಿರುವ ಸಂಪತ್ ಕುಮಾರ್ ತಿಳಿಸಿದರು.

ಗಜ ಚಂಡಮಾರುತ ಕಾಲಿಟ್ಟಿದ್ದರಿಂದ ನಾಗಪಟ್ಟಿಣಂ, ತಿರುವಾರೂರು ಮತ್ತು ತಂಜಾವೂರು ಜಿಲ್ಲೆಗಳ ಹಲವು ಕಡೆಗಳಲ್ಲಿ ಮರಗಳು ಧರೆಗುರುಳಿವೆ. ಮನೆಗಳು ಕುಸಿದು ಹಾನಿಗೀಡಾಗಿವೆ, ವಿದ್ಯುತ್ ಸಂಪರ್ಕ ಕಡಿತವಾಗಿದೆ.

ರಾಜ್ಯ ಸರ್ಕಾರ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸಿ ನಿಭಾಯಿಸುತ್ತಿದೆ. ಈ ಸಮಯ ನಮಗೆ ಸವಾಲಾಗಿದೆ ಎಂದು ಕಂದಾಯ ಸಚಿವ ಆರ್ ಬಿ ಉದಯ್ ಕುಮಾರ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

ವಿದೇಶಿ ಮಹಿಳೆಗೆ ಪತ್ರ ಬರೆದು ಅಂಬೇಡ್ಕರ್ ಸೋಲನ್ನು ನೆಹರು ಸಂಭ್ರಮಿಸಿದ್ದು ನಿಜವಲ್ಲವೇ? 'ಗೂಗಲ್ ಬೇಬಿ'ಯಂತೆ ವರ್ತಿಸಬೇಡಿ!

SCROLL FOR NEXT