ಸಾಂದರ್ಭಿಕ ಚಿತ್ರ 
ದೇಶ

ಪುಲ್ವಾಮ: ಯುವಕನ ಅಪಹರಿಸಿ ಹತ್ಯೆಗೈದ ಉಗ್ರರು

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ ಮಿತಿ ಮೀರಿದ್ದು, ಗುರುವಾರ ರಾತ್ರಿ ಯುವಕನೋರ್ವನನ್ನು ಅಪಹರಿಸಿ ಕೊಂದು ಹಾಕಿದ್ದಾರೆ.

ಪುಲ್ವಾಮಾ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ ಮಿತಿ ಮೀರಿದ್ದು, ಗುರುವಾರ ರಾತ್ರಿ ಯುವಕನೋರ್ವನನ್ನು ಅಪಹರಿಸಿ ಕೊಂದು ಹಾಕಿದ್ದಾರೆ.
ಉಗ್ರರಿಂದ ಅಪಹರಣಕ್ಕೊಳಗಾಗಿದ್ದ ಯುವಕನ ಶವ ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಗುರುವಾರ ರಾತ್ರಿ ಪತ್ತೆಯಾಗಿದೆ. ಯುವಕನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದ್ದು, ಕೊಲೆಯಾದ ವ್ಯಕ್ತಿಯನ್ನು ಸೋಫಿಯಾ ಜಿಲ್ಲೆಯ ಸಫ್ನಾಗ್ರಿ ನಿವಾಸಿ ನದೀಮ್ ಮಂಝೂರ್ ಎಂದು ಪೊಲೀಸರು ಗುರುತಿಸಿದ್ದಾರೆ.
ಪುಲ್ವಾಮಾ ಜಿಲ್ಲೆಯ ಕಿಲೋರ ಪ್ರದೇಶದಲ್ಲಿ ಶವವನ್ನು ವಶಕ್ಕೆ ಪಡೆದಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ರಾತ್ರಿ ವೇಳೆ ನದೀಂ ಎಂಬಾತನನ್ನು ಅಹರಿಸಿದ ಉಗ್ರರು ಬಳಿಕ ಹತ್ಯೆಗೈಯ್ಯುವ ಮೂಲಕ ಕ್ರೌರ್ಯ ಮೆರೆದಿದ್ದಾರೆ. ಪೊಲೀಸರು ಸ್ಥಳದಲ್ಲೇ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಪ್ರಗತಿಯಲ್ಲಿದೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸ್‌ ಇಲಾಖೆ ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಹಲವು ಕುಟುಂಬಗಳ ಹೆಣ್ಮಕ್ಕಳ ಮರ್ಯಾದೆ ಕಳೆದ ಪುಣ್ಯಾತ್ಮ ಡಿಕೆಶಿ; ಪ್ರಜ್ವಲ್​​ ಕೇಸ್​ ಹಿಂದಿದ್ದವರಿಂದ ಮಾಜಿ ಸಿಎಂ ಸ್ಟಿಂಗ್​​ ಆಪರೇಷನ್: HDK ಹೊಸ ಬಾಂಬ್

ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಆಪರೇಶನ್: ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗೆ ಪೆನ್ ಡ್ರೈವ್ ಸಲ್ಲಿಕೆ; ನ್ಯಾಯಾಂಗ ತನಿಖೆಗೆ ಆಗ್ರಹ!

ಬೆಂಗಳೂರಿನಲ್ಲಿ SIR ಪ್ರತಿಭಟನೆ ವೇಳೆ ಪೊಲೀಸ್ ಕ್ರಮ: ಮರು ಪರಿಶೀಲನೆಗೆ ಪ್ರಿಯಾಂಕ್ ಖರ್ಗೆ ಆದೇಶ!

ಪುಣೆ ಟೆಕ್ಕಿ ಆತ್ಮಹತ್ಯೆ: ಡೆತ್‌ನೋಟ್‌ ಪತ್ತೆ; ಸಂಬಳ, ತವರು ಮನೆಯ ಫ್ಲಾಟ್ ವರ್ಗಾಯಿಸುವಂತೆ ಅತ್ತೆ-ಮಾವ ಒತ್ತಡ!

Jantar Mantar ಬಳಿ ಭಾರೀ ಹೈಡ್ರಾಮಾ: ಬ್ಯಾರಿಕೇಡ್ ದಾಟಿದ CJP ನಾಯಕರು ಪೊಲೀಸ್ ವಶಕ್ಕೆ; ಪ್ರತಿರೋಧ ನಿಷೇಧ ಸಾಧ್ಯವಿಲ್ಲ-ಕೇಂದ್ರದ ವಿರುದ್ಧ ದೀಪ್ಕೆ ಆಕ್ರೋಶ